ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಂಡಳಿಯಲ್ಲಿ ಪ್ರಸ್ತುತ ರೂ.2,106 ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ. ಇದಕ್ಕಾಗಿ ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡಬೇಕು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಬೇಕು. ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್ ಅಂತ್ಯದ ಒಳಗೆ ರೂಪಿಸಬೇಕು. ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ. 50 ಕ್ಕೂ ಹೆಚ್ಚಾಗಿ ವಾಸವಿರುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು.
ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಪ್ರಾಕೃತಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗವನ್ನು ರಾಜ್ಯದ ಇತರೆ ಜಿಲ್ಲೆಗಳ ಅಭಿವೃದ್ಧಿ ವೇಗಕ್ಕೆ ಸಮಾನವಾಗಿ ಮುನ್ನಡೆಸಿಕೊಂಡು ಹೋಗಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…