Categories: ರಾಜ್ಯ

ಕಲ್ಯಾಣ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕಾಣಬೇಕು- ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ ಆಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371ಜೆ ಜಾರಿಯಾಗಿದೆ. ಇದು ಜಾರಿ ಆಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ. ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3,000 ಕೋಟಿ ರೂ. ಅನುದಾನ ನೀಡಿದ್ದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಂಪಿಯಲ್ಲಿ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ. ಆದರೆ ಮೌಢ್ಯದಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.

ಕನ್ನಡ ಬದುಕನ್ನು ಉನ್ನತೀಕರಿಸುವ ಆಶಯದಿಂದ ಏಕೀಕರಣ ಚಳವಳಿ ನಡೆದು ಹಲವರ ಪ್ರಾಣ ತ್ಯಾಗವನ್ನೂ ಪಡೆದು ವಿಶಾಲ ಕನ್ನಡ ನಾಡು ಉದಯವಾಗಿದೆ. ಕರ್ನಾಟಕ ನಾಮಕರಣಗೊಂಡು 50 ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು. ಅವರು ಆಚರಿಸಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್ ನಲ್ಲೇ “ಕನ್ನಡ ಸಂಭ್ರಮ-50” ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದು ತಿಳಿಸಿದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿ ಆಗಲು ರಾಜ್ಯಾದ್ಯಂತ ಸುತ್ತಾಡಿದ್ದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರೇಪಿಸಿದ್ದೆ ಎಂದರು.

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ ಶ್ರೀನಿವಾಸ್, ಜಿ.ಎನ್.ಗಣೇಶ್, ಲತಾ,  ಮಂಜುನಾಥ್, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

2 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

3 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

4 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

7 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

19 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

19 hours ago