ವ್ಯಕ್ತಿಯನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆಯ ಎಸ್ ಬಿಐ ಬ್ಯಾಂಕ್ ಬಳಿ ಇಂದು ಮುಂಜಾನೆ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ನಗರದ ಚಾಮರಾಜಪೇಟೆ ಕಾಲೊನಿಯ ಶ್ರೀಕಾಂತ್ (29) ಎಂದು ತಿಳಿದುಬಂದಿದೆ.
ಮೃತ ಶ್ರೀಕಾಂತ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರು. ವಿವಾಹಿತರಾದ ಶ್ರೀಕಾಂತ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಶವದ ಬಳಿ ರಕ್ತಸಿಕ್ತವಾದ ಕಲ್ಲು ದೊರೆತಿದೆ. ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….