ರಸ್ತೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ: ಸಕಲೇಶ್ ಎಂಬಾತ ರವಿ ಎಂಬಾತನ ಮೇಲೆ ಗುಂಡಿನ ದಾಳಿ

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪದಲ್ಲಿ ಬುಧವಾರ ಘಟನೆ ನಡೆದಿದೆ. ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ರಸ್ತೆ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದರಿಂದ ರೈತ ಚಿಕನ್‌ ರವಿ ಮೇಲೆ ಸಕಲೇಶಕುಮಾರ್‌ ಎಂಬಾತ ಫೈರಿಂಗ್‌ ಮಾಡಿದ್ದಾರೆ.

ರಾಜ್ಯದಲ್ಲಿ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ನಡೆದ ಬೆನ್ನಲ್ಲೇ ಮತ್ತೊಂದು ಶೂಟೌಟ್‌ ಪ್ರಕರಣ ಸದ್ದು ಮಾಡಿದೆ.

ಯೆಸ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಮಾಸುವ ಮೊದಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪದಲ್ಲಿ ಮತ್ತೊಂದು ಗುಂಡಿನ ದಾಳಿ ಪ್ರಕರಣ ಬೆಳಕಿಗೆ ಬಂದಿದೆ.

ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ರಸ್ತೆ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದರಿಂದ ರೈತ ಚಿಕನ್‌ ರವಿ ಎಂಬುವವರ ಮೇಲೆ ಸಕಲೇಶಕುಮಾರ್‌ ಎಂಬಾತ ಫೈರಿಂಗ್‌ ಮಾಡಿದ್ದಾನೆ ಎನ್ನಲಾಗಿದೆ.

ಹಾಡಹಗಲೇ ರವಿ ಕಾಲಿಗೆ ಗುಂಡು ಹಾರಿಸಲಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ..

ರಸ್ತೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ಚಿಕನ್ ರವಿ ಕಾಲಿಗೆ ಸಕಲೇಶಕುಮಾರ್ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ.

ಗುಂಡಿನ ದಾಳಿ ನಡೆಸಿರುವ ಸಕಲೇಶಕುಮಾರ್, ಬಿಜೆಪಿ ಮಾಜಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಅವರ ಸಂಬಂಧಿ ಎನ್ನಲಾಗಿದೆ.

ತಲೆಗೆ ಕಲ್ಲಿನಿಂದ ಹೊಡೆದರು ಎಂಬ ಕಾರಣಕ್ಕೆ ಸಕಲೇಶಕುಮಾರ್‌ ಫೈರಿಂಗ್‌ ಮಾಡಿದ್ದಾನೆ ಎನ್ನಲಾಗಿದೆ. ತಲೆಗೆ ಯಾರೋ ಕಲ್ಲು ಹೊಡೆಯುತ್ತೀರಾ ಎಂದು ಗನ್ ಹಿಡಿದು ಸಕಲೇಶಕುಮಾರ್‌ ಬೆದರಿಸಿದ್ದು, ಸ್ಥಳದಲ್ಲಿದ್ದ ಜನ ಭಯಭೀತರಾಗಿದ್ದಾರೆ.

ಸ್ಥಳಕ್ಕೆ ಕುಶಲ್ ಚೌಕ್ಸೆ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Leave a Reply

Your email address will not be published. Required fields are marked *