ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪದಲ್ಲಿ ಬುಧವಾರ ಘಟನೆ ನಡೆದಿದೆ. ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ರಸ್ತೆ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದರಿಂದ ರೈತ ಚಿಕನ್ ರವಿ ಮೇಲೆ ಸಕಲೇಶಕುಮಾರ್ ಎಂಬಾತ ಫೈರಿಂಗ್ ಮಾಡಿದ್ದಾರೆ.
ರಾಜ್ಯದಲ್ಲಿ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ನಡೆದ ಬೆನ್ನಲ್ಲೇ ಮತ್ತೊಂದು ಶೂಟೌಟ್ ಪ್ರಕರಣ ಸದ್ದು ಮಾಡಿದೆ.
ಯೆಸ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಮಾಸುವ ಮೊದಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪದಲ್ಲಿ ಮತ್ತೊಂದು ಗುಂಡಿನ ದಾಳಿ ಪ್ರಕರಣ ಬೆಳಕಿಗೆ ಬಂದಿದೆ.
ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ರಸ್ತೆ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದರಿಂದ ರೈತ ಚಿಕನ್ ರವಿ ಎಂಬುವವರ ಮೇಲೆ ಸಕಲೇಶಕುಮಾರ್ ಎಂಬಾತ ಫೈರಿಂಗ್ ಮಾಡಿದ್ದಾನೆ ಎನ್ನಲಾಗಿದೆ.
ಹಾಡಹಗಲೇ ರವಿ ಕಾಲಿಗೆ ಗುಂಡು ಹಾರಿಸಲಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ..
ರಸ್ತೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ಚಿಕನ್ ರವಿ ಕಾಲಿಗೆ ಸಕಲೇಶಕುಮಾರ್ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ.
ಗುಂಡಿನ ದಾಳಿ ನಡೆಸಿರುವ ಸಕಲೇಶಕುಮಾರ್, ಬಿಜೆಪಿ ಮಾಜಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಅವರ ಸಂಬಂಧಿ ಎನ್ನಲಾಗಿದೆ.
ತಲೆಗೆ ಕಲ್ಲಿನಿಂದ ಹೊಡೆದರು ಎಂಬ ಕಾರಣಕ್ಕೆ ಸಕಲೇಶಕುಮಾರ್ ಫೈರಿಂಗ್ ಮಾಡಿದ್ದಾನೆ ಎನ್ನಲಾಗಿದೆ. ತಲೆಗೆ ಯಾರೋ ಕಲ್ಲು ಹೊಡೆಯುತ್ತೀರಾ ಎಂದು ಗನ್ ಹಿಡಿದು ಸಕಲೇಶಕುಮಾರ್ ಬೆದರಿಸಿದ್ದು, ಸ್ಥಳದಲ್ಲಿದ್ದ ಜನ ಭಯಭೀತರಾಗಿದ್ದಾರೆ.
ಸ್ಥಳಕ್ಕೆ ಕುಶಲ್ ಚೌಕ್ಸೆ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…