ಕೋಲಾರ: ಜಿಲ್ಲೆಯ ಟೇಕಲ್ ಹೋಬಳಿಯ ಮಾಕಾರಹಳ್ಳಿಯಲ್ಲಿ ಸೋಮವಾರ ಕಲ್ಲು ಗಣಿಗಾರಿಕೆ ವೇಳೆ ಕಲ್ಲು ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಪದೇಪದೇ ಇಂತಹ ಸಾವು ನೋವುಗಳ ಘಟನೆಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಆರೋಪಿಸಿದರು.
ಘಟನೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ರಾಜಾರೋಷವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಯಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಇಂತಹ ಸಾವುಗಳಿಗೆ ಬೆಲೆ ಇಲ್ಲವಾಗಿವೆ ಮಾಲೀಕರಿಗೂ ಕಾರ್ಮಿಕರ ಹಿತ ಮುಖ್ಯವಾಗಿಲ್ಲ ಕಲ್ಲು ಒಡೆಯಲು ಬೃಹತ್ ಯಂತ್ರಗಳು, ಸ್ಫೋಟಕ ಬಳಸಿದರೂ ಪೊಲೀಸರಾಗಲಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾಗಲಿ ಕ್ರಮ ವಹಿಸುತ್ತಿಲ್ಲ. ಅರಣ್ಯ ಇಲಾಖೆ ನಿಯಮಗಳು, ಗಣಿ ಇಲಾಖೆ ನಿಯಮಗಳು, ಸ್ಫೋಟಕ ಬಳಕೆ ಕಾನೂನುಗಳನ್ನು ಉಲ್ಲಂಘಿಸಿದ್ದರೂ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.
ಕಲ್ಲು ಗಣಿಗಾರಿಕೆಗಳಿಗೆ ಕಾರ್ಮಿಕ ಇಲಾಖೆಯ ಕಾನೂನುಗಳು ಅನ್ವಯವಾಗುತ್ತವೆ ಆದರೆ ಜಿಲ್ಲೆಯಲ್ಲಿ ಯಾವುದು ಜಾರಿಯಾಗುತ್ತಿಲ್ಲ ಕಲ್ಲು ಗಣಿಗಾರಿಕೆಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಾರ್ಮಿರಿಗೆ ಕಾನೂನು ಬದ್ಧ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗುವುದಿಲ್ಲ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಸಹ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಕಾನೂನು ವಿರುದ್ದವಾಗಿ ಅಕ್ರಮವಾಗಿ ನಡೆಸುತ್ತಿರುವ ಕಲ್ಲುಗಣಿಗಾರಿಕೆಯ ವಿರುದ್ಧ ಜಿಲ್ಲಾಡಳಿತ ಕೂಡಲೇ ಕ್ರಮಕೈಗೊಳ್ಳಬೇಕು. ಅಕ್ರಮ ಕಲ್ಲುಗಣಿಗಾರಿಕೆಯ ಹಿಂದೆ ಇರುವ ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಕಲ್ಲು ಗಣಿಗಾರಿಕೆ ಹೆಸರಲ್ಲಿ ರಾಷ್ಟ್ರೀಯ ಸಂಪತ್ತಿನ ಲೂಟಿ ಬಹಿರಂಗವಾಗಿ ಹಾಗೂ ರಾಜಾರೋಷವಾಗಿ ಹಾಡುಹಗಲೇ ನಡೆದರೂ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗಿಲ್ಲ ಕೆಲವರ ಒತ್ತಡಕ್ಕೆ ಅಧಿಕಾರಿಗಳು ಸರಕಾರಿ ಸಂಪತ್ತು ರಕ್ಷಣೆ ಮಾಡುವ ಸುಳ್ಳು ಭರವಸೆಗಳು ನೀಡುತ್ತಲೇ ಇದ್ದಾರೆ ಹೊರತು ಅದನ್ನು ರಕ್ಷಿಸುವ ಗೋಜಿಗೆ ಇದುವರೆಗೂ ಹೋಗದಿರುವುದು ಅನುಮಾನಕ್ಕೆ ಎಡೆ ಮಾಡಿದೆ ಜೊತೆಗೆ ಕೆರೆಗಳ ಪಕ್ಕದಲ್ಲೇ ಕಲ್ಲು ಪುಡಿ ಮಾಡಲು ಅನುಮತಿ ನೀಡಿ ಕೆರಗಳ ಸೌಂದರ್ಯ ಹಾಳು ಮಾಡಲು ಹೊರಟಿದ್ದಾರೆ ಅವುಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಯಲುವಗುಳಿ ನಾಗರಾಜ್ ಒತ್ತಾಯಿಸಿದರು.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…