ಕಳಪೆ ಗುಣಮಟ್ಟದ ಹಾಲು ಬಳಸಿ ಅನಾರೋಗ್ಯಕ್ಕೆ ಒಳಗಾಗಬೇಡಿ- ನಂದಿನಿ ಹಾಲು ಬಳಸಿ ಆರೋಗ್ಯವಂತರಾಗಿ- ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮನವಿ

ನಾನು ಬಮೂಲ್ ಅಧ್ಯಕ್ಷನಾದ ಮೇಲೆ ದೊಡ್ಡಬಳ್ಳಾಪುರ ಹಾಲು ಉತ್ಪಾದಕರ ಸಮಸ್ಯೆ ತಿಳಿದುಕೊಳ್ಳಲು ಇಂದು  ಇಲ್ಲಿಗೆ ಬಂದಿದ್ದೇ‌ನೆ. ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಕಳಪೆ ಗುಣಮಟ್ಟದ ಹಾಲನ್ನು ಬಳಸಿ ಅನಾರೋಗ್ಯಕ್ಕೆ ಒಳಗಾಗಬೇಡಿ. ಉತ್ತಮ ಗುಣಮಟ್ಟದ ನಂದಿನಿ ಹಾಲನ್ನು ಬಳಸಿ ಆರೋಗ್ಯವನ್ನು ಕಾಪಾಡುವಂತೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಜನರಲ್ಲಿ ಮನವಿ ಮಾಡಿದರು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹಾಲು ಪೂರೈಕೆ ಕಡಿಮೆಯಾಗಿದ್ದು, ಹಾಲು ಪೂರೈಕೆ ಹೆಚ್ಚಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಚರ್ಚಿಸುತ್ತೇವೆ ಎಂದರು.

ಗುಣಮಟ್ಟದ ಹಾಲು ಪೂರೈಕೆ, ರೈತರಿಗೆ ಉತ್ತಮ ದರ ನೀಡುವ ಜೊತೆಯಲ್ಲಿಯೇ, ಗ್ರಾಹಕರ ಹಿತ ಕಾಪಾಡಬೇಕಾದ ಹೊಣೆಗಾರಿಕೆ ಬಮೂಲ್ ಮೇಲಿದೆ ಎಂದು ಹೇಳಿದರು.

ಬಮೂಲ್ ವತಿಯಿಂದ 160ಕ್ಕೂ ಹೆಚ್ಚು ನಂದಿನ ಉತ್ಪಾದಕಗಳನ್ನು ತಯಾರಿಸಲಾಗುತ್ತಿದೆ. ಇದರ ಬಗ್ಗೆ ಜನರಿಗೆ ಸಾಕಷ್ಟು ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ನಂದಿನಿ ಉತ್ಪನ್ನಗಳನ್ನೇ ಬಳಸಬೇಕು ಎಂದು ಮನವಿ ಮಾಡಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಟೆಟ್ರಾ ಪ್ಯಾಕ್ ಘಟಕ ಸ್ಥಾಪನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ಪೂರೈಕೆ ಕಡಿಮೆಯಾಗಿರುವ ಕಾರಣ ಘಟಕ ಸ್ಥಾಪನೆ ಕುರಿತು ಕೆಲ ತಾಂತ್ರಿಕ ಸಮಸ್ಯೆ ಎದುರಾಗಿದೆ. ಟೆಟ್ರಾ ಪ್ಯಾಕ್ ಘಟಕ ಸ್ಥಾಪನೆ ಸಾಧಕ ಬಾಧಕದ ಕುರಿತು ಚರ್ಚೆ ಮಾಡಬೇಕಿದೆ. ಈಗಾಗಲೇ ಪರಿಸರಕ್ಕೆ ಮಾರಕವಾಗದಂತೆ ನಂದಿನ ಹಾಲಿನ ಪ್ಯಾಕ್ ಬಳಕೆಗೆ ಒತ್ತು ನೀಡಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ಎರಡು ರೂ. ಹೆಚ್ಚಳವಾಗಲಿದೆ. ಲಕ್ಷಾಂತರ ಪ್ಲಾಸ್ಟಿಕ್ ಕವರ್ ಬಳಕೆಯಿಂದ ಉಂಟಾಗುತ್ತಿರುವ ಪರಿಸರಮಾಲಿನ್ಯ ತಡೆಯಲು ಗ್ರಾಹಕರ ಸಹಕಾರ, ಪ್ರತಿಕ್ರಿಯೆ ಯಾವ ರೀತಿ ಸಿಗುತ್ತದೆ ಎಂಬುದನ್ನು ತಿಳಿಯಲು ಬೆಂಗಳೂರಿನಲ್ಲಿ ಟ್ರಯಲ್ ಮಾಡಲಾಗುತ್ತಿದೆ ಎಂದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

9 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

13 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

13 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

21 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago