ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದ ವಾಸು ಎಂಬ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ನಂತರ ಬೆಳೆ ಮಾತ್ರ ಎಲ್ಲರ ಕಣ್ಣು ಕುಕ್ಕುವ ಹಾಗೆ ಆಳೆತ್ತರಕ್ಕೆ ಬೆಳೆದು ನಿಂತಿದೆ. ಇದೀಗ ಬೆಳೆಯಲ್ಲಿ ಶೂನ್ಯ ಫಸಲು ಬಂದಿರುವುದು ಮಾತ್ರ ಇದೀಗ ರೈತನಿಗೆ ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಕಾರಣ ಕಳೆದ ಮೂರು ತಿಂಗಳ ಹಿಂದೆ ತೂಬಗೆರೆಯ ಬಿತ್ತನೆ ಬೀಜ ಮಾರಾಟ ಅಂಗಡಿಯಲ್ಲಿ ಹೈದರಾಬಾದ್ ಸಿಡ್ಸ್ 8199 ಮುಸುಕಿನ ಜೋಳದ ಬಿತ್ತನೆ ಬೀಜ ಖರೀದಿಸಿ ತಮ್ಮ ಹೊಲದಲ್ಲಿ ಬಿತ್ತನೆ ಮಾಡಿದ್ದಾರೆ. ಒಂದು ಜೋಳದ ಕಡ್ಡಿಯೊಳಗೆ ಒಂದು ಅಥವಾ ಎರಡು ತೆನೆ ಬರಬೇಕು. ಆದರೆ ಈ ಬಿತ್ತನೆ ಬೀಜದಲ್ಲಿ ಒಂದು ಕಡ್ಡಿಗೆ ನಾಲ್ಕರಿಂದ ಐದು ತೆನೆ ಬಂದಿದೆ. ಬಂದಿರುವ ತೆನೆಯಲ್ಲೂ ಸರಿಯಾಗಿ ಬೀಜ ಉತ್ಪತ್ತಿ ಆಗಿಲ್ಲ ಅನ್ನೋದು ಇದೀಗ ರೈತನ ಆತಂಕಕ್ಕೆ ಕಾರಣವಾಗಿದೆ. ನೀರಿನ ಬವಣೆಯಲ್ಲೂ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ.
ಕಳಪೆ ಬಿತ್ತನೆ ಬೀಜದ ಬಗ್ಗೆ ಕಂಪನಿಯವರಿಗೆ ತಿಳಿಸಿದಾಗ ನಿಮಗೆ ನಷ್ಟ ಆದರೆ ನಾವು ನಿಮ್ಮಗೆ ಪರಿಹಾರ ಕಟ್ಟಿಕೊಡುತ್ತೇವೆ ಎಂದು ತಿಳಿಸಿದ್ದಾರೆ ಆದರೆ ಇದೀಗ ನಾವು ಪರಿಹಾರ ಕಟ್ಟಿಕೊಡುವುದಿಲ್ಲ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಪ್ರಕರಣ ದಾಖಲಿಸಿ ಎಂದು ಬೇಜವಾಬ್ಧಾರಿ ಉತ್ತರ ನೀಡುತ್ತಿದ್ದಾರೆ ಎಂದು ರೈತ ತನ್ನ ಅಳಲು ತೋಡಿಕೊಂಡಿದ್ದಾರೆ.
ಇನ್ನೂ ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳು ರೈತ ಕಷ್ಟ ಪಟ್ಟು ಬೆಳೆದ ಬೆಳೆಗೆ ಪ್ರತಿಫಲವಿಲ್ಲದೆ ಇದೀಗ ರೈತ ಪರಿಹಾರಕ್ಕೆ ಎದುರು ಪರಿಸ್ಥಿತಿ ನಿರ್ಮಾಣವಾಗಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…