ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು ಹಣವನ್ನು ಪೊಲೀಸರು ದೂರುದಾರರಿಗೆ ಹಸ್ತಾಂತರಿಸಿದರು.

ಜೂನ್ 15ರಂದು ಸರಳಾ ಚಂದ್ರಶೇಖರ್ ಅವರ ಮನೆಯಲ್ಲಿ ಚಿನ್ನದ ಮಾಂಗಲ್ಯ ಸರ, ನೆಕ್‌ಲೇಸ್, ನಗದು ಹಣ ಹಾಗೂ ದ್ವಿಚಕ್ರ ವಾಹನ ಕಳುವಾಗಿರುವ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿ, ₹11.42 ಲಕ್ಷ ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಂಡಿದ್ದರು.

ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ₹9.75 ಲಕ್ಷ ಮೌಲ್ಯದ 85 ಗ್ರಾಂ ಚಿನ್ನಾಭರಣ ಹಾಗೂ ₹67 ಸಾವಿರ ನಗದು ಹಣವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಅವರು ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ದೂರುದಾರರಾದ ಸರಳಾ ಚಂದ್ರಶೇಖರ್ ಅವರಿಗೆ ಹಿಂದಿರುಗಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಎಂ.ವಿ. ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ವೆಂಕಟೇಶ್ ಪ್ರಸನ್ನ, ಲಕ್ಷ್ಮೀನಾರಾಯಣ ಎ.ವಿ. ಹಾಗೂ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್‌ಪಿ ಪಾಂಡುರಂಗ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಲಾಗಿತ್ತು.

ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, ಬಿಹಾರದ ಖಾಗರಿಯಾ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಬಂಧಿಸಿ ಕಳವು ಮಾಲು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿತ್ತು. ಪ್ರಕರಣದ ಶೀಘ್ರ ತನಿಖೆ, ಆರೋಪಿಗಳ ಬಂಧನ ಹಾಗೂ ಕಳವಾದ ವಸ್ತುಗಳನ್ನು ದೂರುದಾರರಿಗೆ ಮರಳಿಸಿರುವ ಪೊಲೀಸ್ ತಂಡದ ಕಾರ್ಯವನ್ನು ಹಿರಿಯ ಅಧಿಕಾರಿಗಳು ಪ್ರಶಂಸಿಸಿದ್ದಾರೆ.

Ramesh Babu

Journalist

Recent Posts

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…

2 hours ago

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…

4 hours ago

ಬರ ಘೋಷಣೆ ಬಳಿಕ ಸಿಎಂಗೆ ಮನವಿ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನಡೆಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತರಾಟೆ

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…

7 hours ago

ದೊಡ್ಡಬಳ್ಳಾಪುರ ಬರ ಘೋಷಣೆಗೆ ಕ್ರೆಡಿಟ್ ಫೈಟ್: ಸರ್ಕಾರ ಈಗಾಗಲೇ ಬರ ಘೋಷಿಸಿದೆ; ಮತ್ತೆ ಮನವಿ ಏಕೆ?: ವೆಂಕಟರಮಣಯ್ಯಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತಿರುಗೇಟು

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…

8 hours ago

ದೇವನಹಳ್ಳಿ–ದೊಡ್ಡಬಳ್ಳಾಪುರದ ಹಲವು ಗ್ರಾಮಗಳ ಮೇಲೆ KIADB ಕಣ್ಣು: ಕೃಷಿ ಭೂಮಿ ಉಳಿಸಿಕೊಳ್ಳಲು ಮತ್ತೆ ಹೋರಾಟದ ಸದ್ದು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಕೃಷಿ ಭೂಮಿಯ ಮೇಲೆ ಮತ್ತೊಮ್ಮೆ ಭೂಸ್ವಾಧೀನದ ಆತಂಕ ಆವರಿಸಿದೆ. ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕುಗಳ ವ್ಯಾಪ್ತಿಯಲ್ಲಿ…

9 hours ago

ಶಾಸಕ ಧೀರಜ್ ವಿರುದ್ಧ ವೈಯಕ್ತಿಕ ಟೀಕೆ ಸಲ್ಲದು: ಮಾಜಿ ಶಾಸಕರು ಹಾಗೂ ಬೆಂಬಲಿಗರ ಹೇಳಿಕೆಗಳಿಗೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್ ಆಕ್ಷೇಪ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕರು ಹಾಗೂ ಅವರ ಬೆಂಬಲಿಗರು ವೈಯಕ್ತಿಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು…

1 day ago