Categories: ಕೋಲಾರ

ಕಳುವಾಗಿದ್ದ ನವಜಾತು ಶಿಶು ಮರಳಿ ತಾಯಿ ಮಡಲಿಗೆ: ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶು: 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ

 

ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶುವನ್ನು 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ ಸೇರಿಸಿರುವ ಕೋಲಾರ ಜಿಲ್ಲಾ ಪೊಲೀಸರ ಕಾರ್ಯಕ್ಷಮತೆ ಶ್ಲಾಘನೀಯ. ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಪ್ರಕರಣ ಬೇಧಿಸಿದ ಪೊಲೀಸ್ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ.

ನಿನ್ನೆ ಮಧ್ಯಾಹ್ನ ಸುಮಾರು 4 ಗಂಟೆ ಸಮಯದಲ್ಲಿ ತಾಯಿ ಮತ್ತು ಮಗು ಘಟಕದಿಂದ ನಂದಿನಿ ಎಂಬುವರ 6 ದಿನದ ಗಂಡು ನವಜಾತ ಶಿಶು ಕಳವಾಗಿತ್ತು, ಆಸ್ಪತ್ರೆಯ ಸಿಸಿ ಕ್ಯಾಮಾರಗಳ ಪರಿಶೀಲನೆ ಮಾಡಿದ್ದಾಗ, ಮೂವರು ಅಪರಿಚಿತ ಮಹಿಳೆಯರು ಬ್ಯಾಗ್ ನಲ್ಲಿ ಮಗುವನ್ನ ಹೊತ್ತೊಯುತ್ತಿರುವ ದೃಶ್ಯ ಸೆರೆಯಾಗಿತ್ತು, ಈ ದೃಶ್ಯಗಳ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಪ್ರಕರಣ ದಾಖಲಿಸಿಕೊಂಡ ಕೋಲಾರ ನಗರ ಪೊಲೀಸರು ಮಗು ಕಳ್ಳರ ಪತ್ತೆಗಾಗಿ ಬಲೆ ಬಿಸಿದ್ದರು. ಠಾಣಾ ಇನ್ಸ್ ಪೆಕ್ಟರ್ ಹರೀಶ್ ನೇತೃತ್ವದ ತಂಡ ಮಗುವನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಬೇರಿಕೆ ಎಂಬಲ್ಲಿ ಮಗು ಪತ್ತೆಯಾಗಿದ್ದು, ಮೂವರು ಮಹಿಳೆಯರ ಪೈಕಿ ಒಬ್ಬಳ ಬಂಧನವಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

13 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

14 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

15 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

19 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

20 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

21 hours ago