ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ: 862 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ- ಸಿಎಂ ಸಿದ್ದರಾಮಯ್ಯ

ಕೋವಿಡ್- 19 ನಿಯಂತ್ರಣ ಕುರಿತು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿ, ಈ ವರೆಗೆ ಕೈಗೊಂಡಿರುವ ರೋಗ ನಿಯಂತ್ರಣ ಕ್ರಮಗಳು, ಪ್ರಸ್ತುತ ಪರಿಸ್ಥಿತಿ ಹಾಗೂ ಅಗತ್ಯ ತಯಾರಿಗಳ ಕುರಿತು ಮಾಹಿತಿ ಪಡೆದು, ಅವಶ್ಯಕ ಸಲಹೆ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು:

• ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.

• ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.

• ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ.

• ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ.

• ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ವೇಳೆ ಆರೋಗ್ಯ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ‌ ಪರ್ವೇಜ್, ಬಿಬಿಎಂಪಿ ಆಯುಕ್ತರಾದ ಮಹೇಶ್ವರ ರಾವ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago