ಕೋವಿಡ್- 19 ನಿಯಂತ್ರಣ ಕುರಿತು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿ, ಈ ವರೆಗೆ ಕೈಗೊಂಡಿರುವ ರೋಗ ನಿಯಂತ್ರಣ ಕ್ರಮಗಳು, ಪ್ರಸ್ತುತ ಪರಿಸ್ಥಿತಿ ಹಾಗೂ ಅಗತ್ಯ ತಯಾರಿಗಳ ಕುರಿತು ಮಾಹಿತಿ ಪಡೆದು, ಅವಶ್ಯಕ ಸಲಹೆ ಸೂಚನೆಗಳನ್ನು ನೀಡಿದರು.
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು:
• ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.
• ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.
• ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ.
• ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ.
• ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
• ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ವೇಳೆ ಆರೋಗ್ಯ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್, ಬಿಬಿಎಂಪಿ ಆಯುಕ್ತರಾದ ಮಹೇಶ್ವರ ರಾವ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…