ದೊಡ್ಡಬಳ್ಳಾಪು : ಕಳ್ಳತನದ ಆರೋಪದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ತಂಡ ಯಶಸ್ವಿಯಾಗಿದೆ.
ಸಾಸಲು ಹೋಬಳಿ ಆರೋಡಿ ಗ್ರಾಮದ ನಿವಾಸಿ ನರಸಿಂಹರಾಜು ಬಿನ್ ಲಕ್ಷ್ಮಣ (44) ಬಂಧಿತ ಆರೋಪಿ.
ಕಳೆದ 23 ವರ್ಷಗಳ ಹಿಂದೆ ಕಳ್ಳತನ ₹15000 ಬೆಲೆ ಬಾಳುವ ಸೀಮೆ ಹಸು ಕದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ನಂ 113/2002 ಕಲಂ 379 ಐಪಿಸಿ ಅಡಿಯಲ್ಲಿ ಬೆಂಗಳೂರಿನಲ್ಲಿ ಬಂಧನವಾಗಿದ್ದ ನರಸಿಂಹರಾಜು. ಕೃತ್ಯ ನಡೆದ ವ್ಯಾಪ್ತಿಯ ದೊಡ್ಡಬಳ್ಳಾಪುರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ನಂತರ ಆರೋಪಿ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ.
ತಲೆ ಮರೆಸಿಕೊಂಡಿದ್ದ ಆರೋಪಿ ನರಸಿಂಹರಾಜು ಎಳ್ಳುಪುರ ಗ್ರಾಮದಲ್ಲಿ ವಾಸವಾಗಿದ್ದು, ಖಾಸಗಿ ಕಾರ್ಖಾನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ ಗೋವಿಂದರಾಜು, ಕಾನ್ಸ್‌ಟೇಬಲ್ ನಾಗೇಶ್ ಕುಮಾರ್ ಅವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನಂತರ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಬಿಡಲಾಗಿದೆ.