ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ.
ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಬ್ಬರೂ 2004ರಲ್ಲಿ ತಾಲ್ಲೂಕಿನ ಕೈಗಾರಿಕಾ ಪ್ರದೇಶ ಬಾಶೆಟ್ಟಿಹಳ್ಳಿ ಬಳಿಯ ಟ್ರಾನ್ಸ್ ಎಲೆಕ್ಟ್ರಿಕ್ ಮೋಟರ್ ಕಂಪನಿಯ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಕಂಪನಿಗೆ ಬೀಗ ಹಾಕಿದ್ದ ಸಮಯದಲ್ಲಿ ವಾಚ್ ಮನ್ ಗಳಾಗಿದ್ದ ಇವರಿಬ್ಬರು ಕಂಪನಿಯಲ್ಲಿನ ಮೋಟರ್‌ಗಳನ್ನು ಕಳವು ಮಾಡಿದಲ್ಲದೇ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದರು.
ನಾಗರಾಜು (26) ಮತ್ತು ಶ್ರೀನಿವಾಸಲು (19) ಇಬ್ಬರ ಮೇಲೆ ಮೋಟರ್ ಕಳ್ಳತನದ ಆರೋಪದ ಮೇಲೆ ಕ್ರೈಂ ನಂ 95/2004 ರಂತೆ ಪ್ರಕರಣ ದಾಖಲಾಗಿ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಗೆಳೆಯರು ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.
ಆರೋಪಿಗಳ ಪರ ವಾದ ಮಾಡಿದ್ದ ವಕೀಲ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಿಗೆ ಸಂಪೂರ್ಣ ಮಾಹಿತಿ ನೀಡದೆ ನಿಮ್ಮ ಮೇಲಿನ ಪ್ರಕರಣ ವಜಾ ಆಗಿದೆ ಎಂದು ಹೇಳಿದ್ದರು. ಹೀಗಾಗಿ ನಾವು ಈ ವಿಚಾರವನ್ನು ಮರೆತಿದ್ದೆವು ಎಂದು ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಿಳಿಸಿದ್ದಾರೆ.
ಇಪ್ಪತ್ತು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರದ ಜೆಎಂಎಫ್‌ಸಿ ನ್ಯಾಯಾಲಯ ಎಲ್‌ಆರ್‌ಪಿ (ತಲೆ ಮರೆಸಿಕೊಂಡ ಆರೋಪಿಗಳು) ಗಳು ಎಂದು ನಿರ್ಧಾರ ಮಾಡಿತ್ತು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ತನಿಖೆಗೆ ಇಳಿದ ತಂಡ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ಆರೋಪಿ ನಾಗರಾಜು
ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ, ಪುಟ್ಟಪರ್ತಿ ಎರಡು ಪೊಲೀಸ್ ಠಾಣೆಗಳಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ನಾಗರಾಜು, ನಂತರ ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲಸ ಬಿಟ್ಟು, ಧರ್ಮಾವರಂ ಜಿಲ್ಲೆ ಸಿದ್ದರಾಮಪುರಂ ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ.
ಉಸ್ಮಾನಿಯಾ ವಿವಿಯಲ್ಲಿ ಎಂಬಿಎ ಪದವೀಧರ ಆರೋಪಿ ಶ್ರೀನಿವಾಸಲು
ಬಂಧನವಾಗಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದ ಮತ್ತೊಬ್ಬ ಆರೋಪಿ ಶ್ರೀನಿವಾಸಲು ಆಂಧ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಜೊತೆಗೆ ಮಾರ್ಕೆಟಿಂಗ್ ಗ್ರಾಜ್ಯುಯೆಷನ್ ಪಡೆದು ಟಾಟಾ ಕಂಪನಿಯಲ್ಲಿ ಮಾರ್ಕೆಟಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ.
ಒಮ್ಮೆ ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಕಲಿತಿದ್ದ ಇಬ್ಬರೂ ಆರೋಪಿಗಳು ಮತ್ತೆ ಕೆಟ್ಟದಾರಿ ಹಿಡಿಯದೆ ಓದಿ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ನಡೆಸುತ್ತಿದ್ದರು. ಆದರೆ, ಮಾಡಿದ ಪಾಪ ಈಗಲೇ ಅನುಭವಿಸಬೇಕು ಎಂಬ ನಾಣ್ಣುಡಿಯಂತೆ ಮಾಡಿದ ತಪ್ಪಿಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
ಈ ವೇಳೆ ಮುಖ್ಯಪೇದೆ ಗೋವಿಂದರಾಜು, ಪೇದೆ ನಾಗೇಶ್ ಇದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…