ಕಳ್ಳತನ ಹಾಗೂ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಕೆಲ ತಿಂಗಳ ಹಿಂದೆ ನಡೆದ ಘಟನೆ, ತಡವಾಗಿ ಬೆಳಕಿಗೆ ಬಂದಿದೆ.
ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು, ಚಿತ್ರಹಿಂಸೆ ನೀಡಿ ಅಮಾನವೀಯ ಮೆರೆಯಲಾಗಿದೆ.
ಕೋಲು ದೊಣ್ಣೆ, ಡ್ರಿಪ್ ಪೈಪ್ ನಿಂದ ಹಲ್ಲೆ ಮಾಡಿ ಚಿತ್ರಹಿಂಸೆ ನೀಡಿ ವಿಕೃತಿ ಮೆರೆದಿರುವ ಯುವಕರ ಗುಂಪು.
ಹಲ್ಲೆ ಮಾಡಿ ಅಮಾನವೀಯತೆ ಮೆರೆದ ಸದ್ಯ ಒಂಬತ್ತು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಒಬ್ಬನ್ನು ವಶಕ್ಕೆ ಪಡೆಯಲಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿ- ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಯುವಕರಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…