ಕಸದ ಸಮಸ್ಯೆಗೆ ಮುಕ್ತಿ ನೀಡುವಂತೆ ಡಿಸಿಎಂ ಕಾಲಿಗೆ ಬಿದ್ದ ಶಾಸಕ ಧೀರಜ್ ಮುನಿರಾಜ್- ಕಸದ ಸಮಸ್ಯೆಗೆ ಮುಂದಿನಗಳಲ್ಲಿ ಮುಕ್ತಿ- ದೊಡ್ಡಬಳ್ಳಾಪುರಕ್ಕೆ ಹೆಚ್ಚಿನ ಆದ್ಯತೆ- ಡಿಸಿಎಂ‌ ಡಿಕೆಶಿ ಭರವಸೆ

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯು ಸಂಪೂರ್ಣವಾಗಿ ಕೃಷಿಯನ್ನೇ ಅವಲಂಬಿಸಿದೆ. ಇಲ್ಲಿ ಯಾವುದೇ ಖಾಸಗಿ ಲೇಔಟ್ ಗಳು ಇಲ್ಲ, ಖಾಸಗೀಕರಣ ಆಗಿಲ್ಲ. ಎತ್ತಿನಹೊಳೆ ಯೋಜನೆಯಿಂದಾಗಿ ರೈತರು ಜಮೀನು ಕಳೆದುಕೊಳ್ಳುವುದಲ್ಲದೇ ಜಲಾಶಯ ಪ್ರದೇಶದ ಸುತ್ತಾಮುತ್ತ ಹಳ್ಳಿಗಳು ಮುಳುಗಡೆಯಾಗುತ್ತವೆ. ಆದ್ದರಿಂದ ರೈತರಿಗೆ ಜಮೀನು, ಮನೆ ಸಮೇತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕ ಧೀರಜ್ ಮುನಿರಾಜ್ ಅವರು ಡಿಸಿಎಂ ಡಿಕೆಶಿ ಬಳಿ ಕಾಲಿಗೆ ಬಿದ್ದು, ಕೈ ಮುಗಿದು ಮನವಿ ಮಾಡಿದರು.

ಇಂದು ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಪರಿಶೀಲನೆ ನಡೆಸಿದೆ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯಿಂದ ಜಮೀನು, ಮನೆ ಕಳೆದುಕೊಂಡವರಿಗೆ ಇದೇ ಹೋಬಳಿಯಲ್ಲಿ ಜಮೀನು,‌ ಮನೆ ವ್ಯವ್ಯಸ್ಥೆ ಕಲ್ಪಿಸಬೇಕು. ಇಲ್ಲಿ ಬೇಕಾದಷ್ಟು ಸರ್ಕಾರಿ ಭೂಮಿ‌ ಇದೆ. ಬೇರೆಲ್ಲೂ ಪರ್ಯಾಯ ವ್ಯವಸ್ಥೆ ಮಾಡದೇ ಇಲ್ಲೇ ರೈತರನ್ನು ಉಳಿಸಿಕೊಳ್ಳಬೇಕು ಎಂದರು.

ಈ ಯೋಜನೆಯಿಂದ ನಮ್ಮ ತಾಲೂಕಿನಲ್ಲಿ ಕೇವಲ 7 ಕೆರೆಗಳು ಮಾತ್ರ ತುಂಬುತ್ತವೆ. ನಮ್ಮಲ್ಲಿ ಒಂದೇ ಒಂದು ಕುಡಿಯುವ ನೀರಿನ ಯೋಜನೆ ಇಲ್ಲ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 29‌ ಕೆರೆಗಳಿವೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತೂಬಗೆರೆ ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 10 ಸಣ್ಣ ನೀರಾವರಿ ಕೆರೆಗಳಿವೆ. ಈ ಎಲ್ಲಾ ಕೆರೆಗಳಿಗೂ ಎತ್ತಿನಹೊಳೆ ನೀರು ಹೋಗಬೇಕು. ಆ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದರು.

ಅದೇರೀತಿ ಸಾಸಲು ಹೋಬಳಿಯ ದೊಡ್ಡ ಸಮಸ್ಯೆ ಎಂಎಸ್ ಜಿಪಿ ಘಟಕ. ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುವ ಕಸವನ್ನು ನಿಲ್ಲಿಸಬೇಕು.

ಎರಡು ವರ್ಷಗಳಿಂದಲು ಬಿಬಿಎಂಪಿ ವತಿಯಿಂದ ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಅನುದಾನವನ್ನು ಪಡೆಯದೆ ವಿರೋಧಿಸಲಾಗಿದೆ. ನಮಗೆ ಬೇಕಿರುವುದು ಬಿಬಿಎಂಪಿ ಅನುದಾನವಲ್ಲ, ಕಸ ಇಲ್ಲಿಗೆ ಬರುವುದು ನಿಲ್ಲಬೇಕು. ಬಿಬಿಎಂಪಿ ಕಸ ಇಲ್ಲಿಗೆ ಬರುತ್ತಿರುವುದರಿಂದ ಅಂತರ್ಜಲ ಕಲುಷಿತವಾಗಿ ದೊಡ್ಡಬೆಳವಂಗಲ ಹಾಗೂ ಸಾಸಲು ಭಾಗದ ಹತ್ತಾರು ಗ್ರಾಮಗಳ ಜನರು ನಾನಾ ರೀತಿಯ ಚರ್ಮ ರೋಗ ಸೇರಿದಂತೆ ಹಲವಾರು ಆರೋಗ್ಯದ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಅಂತರ್ಜಲ ಬಳಕೆಯಿಂದ ಬೆಳೆಗಳು ಸಹ ಹಾಳಾಗುತ್ತಿವೆ. ಇದರ ವಿರುದ್ಧ ಈಗಾಗಲೇ ಹಲವಾರು ಜನ ರೈತರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರುಗಳನ್ನು ದಾಖಲಿಸಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಹ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುರಿತು ವರದಿ ನೀಡಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲು ಕಸ ವಿಲೇವಾರಿ ಘಟಕ ಮುಚ್ಚುವಂತೆ ನಿರ್ಣಯ ಅಂಗೀಕರಿಸಿದ್ದಾರೆ ಎಂದರು.

ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮೊದಲು ನಾವು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ದೊಡ್ಡಬಳ್ಳಾಪುರ ತಾಲೂಕಿಗೆ ಹೆಚ್ಚು ಒತ್ತು‌ಕೊಟ್ಟು ರೈತರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ವ್ಯವ್ಯಸ್ಥೆ ಕಲ್ಲಿಸಿಕೊಡುತ್ತೇನೆ. ಇಡೀ ರಾಜ್ಯದಲ್ಲಿ ಕಸದ ಸಮಸ್ಯೆ ಇದೆ. ಕಸದ ಸಮಸ್ಯೆಗೆ ಪರ್ಯಾಯ ಮಾರ್ಗ ಕಂಡುಕೊಳ್ಳಲಾಗುತ್ತಿದೆ. ಒಂದು ದಿನದ ಕಸ ಮೂರು ದಿನದಲ್ಲಿ ಸಂಪೂರ್ಣವಾಗಿ ಬರ್ನ್ ಆಗಬೇಕು. ಕಸದಿಂದ ಗ್ಯಾಸ್, ವಿದ್ಯುತ್ ಉತ್ಪಾದನೆ ಆಗಬೇಕು. ಮೊದಲು ಬೆಂಗಳೂರು ನಗರದಲ್ಲೇ ಈ ಪ್ಲಾನ್ ನನ್ನು ಜಾರಿಗೆ ತರುತ್ತೇವೆ. ನಂತರ ಗ್ರಾಮೀಣ ಭಾಗದಲ್ಲಿ ಸುಮಾರು ಹತ್ತು ಎಕರೆಯಲ್ಲಿ ಕಸದಿಂದ ಗ್ಯಾಸ್, ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಎಂಎಸ್ ಜಿಪಿ ಕಸ ವಿಲೇವಾರಿ ಘಟಕ ವೀಕ್ಷಣೆಗೆ ಪ್ರತ್ಯೇಕವಾಗಿ ಇನ್ನೊಂದು ದಿನ ಬರುತ್ತೇನೆ. ಬಂದು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೆನೆ ಎಂದರು.

ಎತ್ತಿನಹೊಳೆ ಯೋಜನೆಗೆ ಭೂಮಿಕೊಟ್ಟ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಹೊಸದಾಗಿ ಹಳ್ಳಿಗಳನ್ನು ಕಟ್ಟುವಂತಹ ಕೆಲಸ ಮಾಡುತ್ತೇವೆ ಎಂದರು.

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 14.5 ಟಿ.ಎಂ.ಸಿ ನೀರನ್ನು ನೀಡಬೇಕಾಗಿದೆ ಹಾಗಾಗಿ ಯಾವುದೇ ತಾಲೂಕಿನ ಕೆರೆಗಳನ್ನು ತುಂಬಿಸಬಾರದು.

ಅದಕ್ಕಿಂತ ಮೊದಲು ಲಕ್ಕೇನಹಳ್ಳಿ ಭಾಗದಲ್ಲಿ ಸಮತೋಲನ ಜಲಾಶಯ ಆಗುವುದರಿಂದ ನಿಮ್ಮ ಬೇಡಿಕೆಯ ಕೆರೆಗಳನ್ನು ತುಂಬಿಸಲು ವಿಶೇಷ ಗಮನ ಹರಿಸಲಾಗುವುದು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಎತ್ತಿನ ಹೊಳೆ ಯೋಜನೆಗೆ ಜಮೀನು, ಮನೆ ಕಳೆದುಕೊಳ್ಳುವ ರೈತರಿಗೆ ಗರಿಷ್ಠ ಪರಿಹಾರವನ್ನು ಒಂದು ತಿಂಗಳೊಳಗಾಗಿ ನೀಡಬೇಕು ಹಾಗೂ ಭೂಮಿ ಕಳೆದುಕೊಳ್ಳುವ ರೈತರಿಗೆ ಕನಿಷ್ಟ ಎರಡು ಎಕರೆ ಭೊಮಿಯನ್ನು ಲಭ್ಯವಿರುವ ಕಡೆ ನೀಡಬೇಕು ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

1 hour ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago