ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ ಪ್ರಮುಖ ಅಂಶಗಳು ಇಲ್ಲಿದೆ ಓದಿ…

ಕಸ್ತೂರಿ ರಂಗನ್ ವರದಿ ಮತ್ತು ಭೌತಿಕ ಸಮೀಕ್ಷೆ ಕುರಿತು:

• ಕಸ್ತೂರಿ ರಂಗನ್ ಸಮಿತಿಯು ಉಪಗ್ರಹಗಳ ಮೂಲಕ ಜಿಪಿಎಸ್ ಸಮೀಕ್ಷೆ ಮಾಡಿದ್ದು, ಕಾಫಿ, ಅಡಿಕೆ, ರಬ್ಬರ್ ತೋಟವನ್ನು ಕಾಡು ಎಂದು ಪರಿಗಣಿಸಿದೆ; ಈ ವರದಿಯಿಂದ ಜಿಲ್ಲೆಯಲ್ಲಿ 138 ಹಳ್ಳಿಗಳು ಹಾಗೂ ರಾಜ್ಯದಲ್ಲಿ 1,449 ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಅಧಿಸೂಚನೆ ಮಾಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ.

• ಕೇರಳದಲ್ಲಿ ಉಮರ್ ಸಮಿತಿ ಎಂಬ ಉನ್ನತ ಮಟ್ಟದ ಅಧಿಕಾರಿ ಸಮಿತಿ ಮೂಲಕ ಭೌತಿಕ ಸಮೀಕ್ಷೆ ನಡೆಸಿ, ನಾಡು-ಕಾಡನ್ನು ಬೇರ್ಪಡಿಸಿ 5,000 ಚ.ಕಿ.ಮೀ ಪ್ರದೇಶವನ್ನು ವರದಿಯಿಂದ ಮುಕ್ತಗೊಳಿಸಲಾಗಿದೆ; ಅದೇ ಮಾದರಿಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸುವಂತೆ ರೈತ ಮುಖಂಡರು ಸಲಹೆ ನೀಡಿದ್ದಾರೆ.

• 2022ರಲ್ಲಿ ಸಂಜಯ್ ಕುಮಾರ್ ಎಂಬ ಅಧಿಕಾರಿಯಿಂದ ವರದಿ ನೀಡಲು 2027ರವರೆಗೆ ಕಾಲಾವಕಾಶ ನೀಡಿರುವ ವಿಚಾರ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು; ಅಗತ್ಯ ಬಿದ್ದರೆ ಕೇಂದ್ರಕ್ಕೆ ಪ್ರತ್ಯೇಕ ನಿಯೋಗ ಕರೆದೊಯ್ಯಲಾಗುವುದು.

• ಈ ವರದಿಗೆ ಸಂಬಂಧಿಸಿದಂತೆ ಈಗ 7ನೇ ಬಾರಿಗೆ ಅಧಿಸೂಚನೆ ಹೊರಡಿಸಿದ್ದು, ಇದು ಸಾಡೇಸಾತಿಯಂತಾಗಿದೆ; ಮಲೆನಾಡು ಹಾಗೂ ಕರಾವಳಿ ಭಾಗವನ್ನು ವಿಶೇಷ ಕೃಷಿ ವಲಯ ಎಂದು ಘೋಷಿಸಬೇಕು ಮತ್ತು ಮೀಸಲು ಜಲ ಪ್ರಮಾಣ ಘೋಷಣೆ ಮಾಡಬೇಕು ಎಂಬ ಬೇಡಿಕೆಗಳಿದ್ದು, ಈ ಸಮಸ್ಯೆಗಳನ್ನು ನಿವಾರಣೆ ಮಾಡುವ ವಿಶ್ವಾಸವಿದೆ.

ಸರ್ಕಾರದ ಮುಂದಿನ ನಡೆ ಹಾಗೂ ಅಧಿವೇಶನದ ತೀರ್ಮಾನ:

• ಪರಿಸರ ಸೂಕ್ಷ್ಮ ವಲಯ ಸೇರಿದಂತೆ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು, ರಾಜ್ಯದ ಹಿತಕ್ಕಾಗಿ ಅಗತ್ಯವಿರುವ ಕಾನೂನು ತಿದ್ದುಪಡಿ ಮಾಡಲು ನಮ್ಮ ಸರ್ಕಾರ ಕೆಲಸ ಮಾಡಲಿದೆ; ಈ ಕುರಿತು ಅಂತಿಮ ತೀರ್ಮಾನಕ್ಕೆ ಬರುವ ಮುನ್ನ ಜನರ ಅಭಿಪ್ರಾಯ ಸಂಗ್ರಹಿಸಲು ಬಂದಿರುವೆ.

• ವಿರೋಧ ಪಕ್ಷದವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡದ ಕಾರಣ ಶಾಸಕರ ಜೊತೆ ಚರ್ಚಿಸಲಾಗಿದ್ದು, ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾಪವಾದ ಹಿನ್ನೆಲೆಯಲ್ಲಿ ಜನರ ಅಭಿಪ್ರಾಯ ಪಡೆದು ರೈತರ ಬದುಕು ಉಳಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ.

• ರಾಜ್ಯದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಕೇಂದ್ರದ ಮಾರ್ಗಸೂಚಿಯಂತೆ ಉಳಿದ ಕಡೆ ಅಧ್ಯಯನ ನಡೆಯುತ್ತಿದೆ; ಒಂದೆರಡು ದಿನಗಳಲ್ಲಿ ಮತ್ತೊಂದು ಪಟ್ಟಿ ಬಿಡುಗಡೆಯಾಗಲಿದ್ದು, ವಿಶೇಷ ಅಧಿವೇಶನದಲ್ಲಿ ಬರ ಹಾಗೂ ಕಸ್ತೂರಿ ರಂಗನ್ ವರದಿ ಬಗ್ಗೆ ವಿಸ್ತೃತ ಚರ್ಚೆ ಮಾಡಲಾಗುವುದು.

ಅರಣ್ಯವಾಸಿಗಳ ಹಕ್ಕು ಮತ್ತು ಭೂಮಿ ಒದಗಿಸುವಿಕೆ:

• ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ರೈತರಿಗೆ ಯಾವುದೇ ರೀತಿ ತೊಂದರೆ ಕೊಡಬಾರದು ಮತ್ತು ರೈತರು ಈಗಾಗಲೇ ಉಳುಮೆ ಮಾಡುತ್ತಿರುವ ಜಮೀನನ್ನು ಕಾಪಾಡಿಕೊಳ್ಳಬೇಕು; ಆದರೆ ಹೊಸದಾಗಿ ಯಾರೂ ಒತ್ತುವರಿ ಮಾಡಬಾರದು, ಮಾಡಿದರೆ ಅವಕಾಶ ನೀಡುವುದಿಲ್ಲ.

• ನಮ್ಮ ಹಿಂದಿನ ಸರ್ಕಾರಗಳು ಉಳುವವನಿಗೆ ಭೂಮಿ, ಬಗರ್ ಹುಕುಂ ಜಾರಿಗೆ ತಂದಿದ್ದು, ಬಾಕಿ ಇರುವ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು; ಕಾಫಿ ಲೀಸ್, ಫಾರಂ 57 ವಿಚಾರ ಹಾಗೂ ಅರಣ್ಯ ಹಕ್ಕು ಕಾಯ್ದೆಯಲ್ಲಿ ಎಲ್ಲರಿಗೂ 25 ವರ್ಷ ನಿಗದಿ ಮಾಡಲು ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಸ್ಥಳೀಯ ಅಭಿವೃದ್ಧಿ ಹಾಗೂ ಸಚಿವ ಸಂಪುಟ ಸಭೆ:

• ನನ್ನ ಕಷ್ಟಕಾಲದಲ್ಲಿ ಬೆನ್ನಿಗೆ ನಿಂತು, ಅಧಿಕಾರ ಕೊಟ್ಟು ಶಕ್ತಿ ನೀಡಿದ್ದೀರಿ; ದೇವರು ಕೊಟ್ಟಿರುವ ಅವಕಾಶದಲ್ಲಿ ನಿಮ್ಮ ಸೇವೆಗೆ ಸಂಕಲ್ಪ ಮಾಡಿದ್ದೇನೆ.

• ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು; ಎಲ್ಲಾ ಸಮಸ್ಯೆಗಳು ಬಗೆಹರಿಯದಿದ್ದರೂ, ಪಿಂಚಣಿ ಹಾಗೂ ನಿವೇಶನ ರಹಿತರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಮುಂದಾಗುತ್ತೇವೆ ಎಂದು ಸಿಎಂ ಹೇಳಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

5 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

7 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

10 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

11 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

18 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

18 hours ago