ಮಕ್ಕಳ ಸಹಾಯವಾಣಿಗೆ ಬ೦ದ ದೂರಿನ ಹಿನ್ನಲೆಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಬುಧವಾರ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಪನಹಳ್ಳಿ ಗ್ರಾಮದಲ್ಲಿರುವ ಕಸ ವಿಂಗಡಣೆ ಘಟಕದಲ್ಲಿ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.
ತಪಾಸಣೆ ವೇಳೆಯಲ್ಲಿ ಯಾವುದೇ ಮಕ್ಕಳು ಕೆಲಸ ನಿರ್ವಹಿಸುತ್ತಿರುವುದು ಪತ್ತೆಯಾಗಿಲ್ಲ. ಆದರೆ 09 ಮಕ್ಕಳು ಶಾಲೆಯಿಂದ ಹೊರ ಉಳಿದು ಪೋಷಕರ ಜೊತೆಯಲ್ಲಿ ವಾಸವಾಗಿದ್ದರು. ಇವರು ಮೂಲತಃ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯದವರು.
ತಪಾಸಣೆ ವೇಳೆ ಸಿಕ್ಕಂತಹ ಮಕ್ಕಳನ್ನು ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಸರ್ವೋದಯ ಸರ್ವಿಸ್ ಸೊಸೈಟಿಯಲ್ಲಿ ಪುನರ್ ವಸತಿಗೊಳಿಸಿ, ದೇವನಹಳ್ಳಿಯ ಬಾಲಕಿಯರ ಬಾಲ ಮಂದಿರಕ್ಕೆ ಹಸ್ತಾಂತರಿಸಲಾಯಿತು.
ಮುಂದಿನ ಶುಕ್ರವಾರದಂದು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗುವುದು.
ಈ ತಪಾಸಣೆ ವೇಳೆ ಕಸ ವಿಂಗಡಣೆ ಘಟಕದಲ್ಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳು ಇಲ್ಲದಿರುವುದರಿಂದ ಅಧಿಕಾರಿಗಳ ಗಮನಕ್ಕೆ ಬಂದಿದೆ, ಮಕ್ಕಳು ಹಾಗೂ ಪೋಷಕರನ್ನು ಕಸ ವಿಂಗಡಣೆ ಘಟಕದಿಂದ ಸುಮಾರು 500 ಮೀಟರ್ ದೂರದಲ್ಲಿ ವಾಸಿಸುವುದಕ್ಕೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶೆಡ್ ಗಳನ್ನು ನಿರ್ಮಿಸಿಕೊಡಬೇಕೆಂದು ಕಸ ವಿಂಗಡಣೆ ಘಟಕದ ಗುತ್ತಿಗೆದಾರರಿಗೆ ಅಧಿಕಾರಿಗಳು ಸೂಚಿಸಿದರು.
ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕ ಅಂಬಿಕಾ, ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಸಂಜು, ಬಿಇಓ ಕಚೇರಿಯ ನಾಗಪ್ಪ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಸೌಮ್ಯ ಹಾಜರಿದ್ದರು.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…