ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಕಾಡತಿಪ್ಪೂರು ಗ್ರಾಮದ ಅರಸಮ್ಮ (45) ಮೃತ ಮಹಿಳೆ. ಬೆಂಗಳೂರಿನಿಂದ ತಂದು ಹಾಕಲಾಗುವ ಕಸವನ್ನು ವಿಂಗಡಣೆ ಮಾಡುವ ಘಟಕದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಅರಸಮ್ಮ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಶುಕ್ರವಾರ ಬೆಳಗ್ಗೆ ಕಸ ವಿಂಗಡಣೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿಕೊಂಡಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೈ-ಕಾಲುಗಳಿಗೆ ತೀವ್ರ ಹಾನಿಯಾಗಿರುವುದಾಗಿ ತಿಳಿದುಬಂದಿದೆ.
ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ಹಾಗೂ ಸುರಕ್ಷತಾ ಕ್ರಮಗಳ ಕುರಿತು ತನಿಖೆ ಮುಂದುವರಿದಿದೆ.
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…
ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ…