Categories: ಕೋಲಾರ

ಕಾಂಗ್ರೆಸ್ ಅಭಿವೃದ್ಧಿಯ ಹೆಸರಲ್ಲಿ ಮತ ಕೇಳಲಿದೆ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕಳೆದ ಹತ್ತು ವರ್ಷದಿಂದ ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇದ್ದರೂ ಸಾಮಾನ್ಯ ಜನರಿಗೆ ಉಪಯೋಗವಾಗುವ ಒಂದಾದರೂ ಯೋಜನೆ ತಂದಿದ್ದಾರಾ ಬರೀ ಜನರನ್ನು ಜಾತಿ ಧರ್ಮದ ಹೆಸರಿನಲ್ಲಿ ಕೋಮುಗಲಭೆಗಳನ್ನು ಸೃಷ್ಟಿಸಿದ್ದಾರೆ ನಿಮಗೆಲ್ಲ ಅವಕಾಶ ಬಂದಿದೆ ಸರಿಯಾಗಿ ಬಳಸಿಕೊಂಡು ಜನರ ನೆಮ್ಮದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ತಾಲೂಕಿನ ಸೂಲೂರು ಚೌಡದೇನಹಳ್ಳಿ, ಬೆಳ್ಳೂರು ಗ್ರಾಮಗಳಲ್ಲಿ ಶನಿವಾರ ನಡೆದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಪರವಾಗಿ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಪಕ್ಷವು ಬರೀ ಭರವಸೆಗಳನ್ನು ನೀಡಿ ಜನರನ್ನು ಯಾಮಾರಿಸಿದ್ದಾರೆ ಆದರೆ ಕಾಂಗ್ರೆಸ್‌ ಪಕ್ಷವು ಚುನಾವಣಾ ಪೂರ್ವದಲ್ಲಿ ನುಡಿದಂತೆ ಅಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ನಡೆದಿದ್ದೇವೆ ನೀವುಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡಿದ್ದು ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಬೆಂಬಲ ನೀಡಬೇಕು ಪ್ರತಿ ಗ್ರಾಮಗಳಲ್ಲಿ ರಾಜ್ಯ ಸರಕಾರದಿಂದ ಅಭಿವೃದ್ದಿ ಪಡಿಸಲು ಕ್ರಮ ವಹಿಸಲಾಗಿದೆ ಮುಳಬಾಗಿಲಿನಲ್ಲಿ ನಾನು ಶಾಸಕನಾಗಿ ಅಭಿವೃದ್ದಿ ಪಡಿಸಲು ಕನಸ್ಸು ಕಂಡಿದ್ದೆ ಎರಡನೇ ಬಾರಿ ಅವಕಾಶ ಸಿಗಲಿಲ್ಲ ಆ ಕನಸ್ಸನ್ನು ಕೋಲಾರ ಕ್ಷೇತ್ರದಲ್ಲಿ ಈಡೇರಿಸಿ ಜನ ಪರವಾಗಿ ಆಡಳಿತ ನೀಡುವುದೇ ನನ್ನ ಗುರಿ ಎಂದು ಆಶ್ವಾಸನೆ ನೀಡಿದರು‌.

ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳಿಂದ ಅಭಿವೃದ್ಧಿ ಮಾಡಲ್ಲ ಎಂದು ಅಪಪ್ರಚಾರ ಮಾಡಲು ಹೊರಟಿದ್ದರೂ ಸಿದ್ದರಾಮಯ್ಯ ಯಾವುದೇ ಭ್ರಷ್ಟಾಚಾರ ಮಾಡದೇ ಕಮೀಷನ್ ಪಡೆಯದೇ ನೇರವಾಗಿ ಜನರ ಖಾತೆಗಳಿಗೆ ಹಣ ಜಮಾ ಮಾಡಿದ್ದಾರೆ ಬೇರೆ ಪಕ್ಷಗಳನ್ನು ದೂಷಿಸುವುದು ಬೇಡ ನಮ್ಮ ಅಭಿವೃದ್ದಿ ಕೆಲಸಗಳನ್ನು ತಿಳಿಸಿ ಪ್ರಚಾರ ಮಾಡಿ ಮತ ಕೇಳೋಣ ಈಗಾಗಲೇ ಜೆಡಿಎಸ್ ಬಿಜೆಪಿ ಮೈತ್ರಿ ಅಪವಿತ್ರವಾಗಿ ಮುಳುಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ ಅನಿಲ್ ಕುಮಾರ್ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ‌ ಕಾಂಗ್ರೆಸ್ ಎಲ್ಲಿದೆ ಅಂತ ಕೇಳಿದ ವಿರೋಧ ಪಕ್ಷದವರಿಗೆ ಮತದಾರರು ಉತ್ತರ ಕೊಟ್ಟಿದ್ದಾರೆ ದಿನನಿತ್ಯ ಅಪಪ್ರಚಾರ ಮಾಡಿದರು ಆದರೆ ಗ್ರಾಮೀಣ ಭಾಗದಲ್ಲೂ ಸಹ ಕಾಂಗ್ರೆಸ್ ಎರಡನೇ ಸ್ಥಾನ ಗಳಿಸಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ೫ ಗ್ಯಾರೆಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದೆವು ಅದರಂತೆ ಸ್ಪಷ್ಟ ಬಹುಮತದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರು ತಿಂಗಳಲ್ಲಿ ೫ ಗ್ಯಾರೆಂಟಿಗಳನ್ನು ಜಾರಿಗೆ ತಂದಿದ್ದಾರೆ ಎಂದರು.

ಕೇಂದ್ರ ಸರ್ಕಾರಕ್ಕೆ ಕೆಜಿ ಅಕ್ಕಿಗೆ ೩೪ ರೂ ಕೊಡುತ್ತೇವೆ ಎಂದರೂ ಅಕ್ಕಿ ಕೊಡಲಿಲ್ಲ ಅಕ್ಕಿ ಬದಲಾಗಿ ಜನರ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ ಕೇಂದ್ರದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತಿಂಗಳಿಗೆ ಮಹಿಳೆಯರಿಗೆ ೮ ಸಾವಿರ ಕೊಡುತ್ತೇವೆ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಭಾಗಕ್ಕೂ ವಿಸ್ತರಣೆ ಮಾಡಿ ಕನಿಷ್ಠ 400 ರೂಪಾಯಿ ಕೂಲಿ ನೀಡಲಾಗುತ್ತದೆ ಉದ್ಯೋಗ ಮಾಡಲು ಒಂದು ಲಕ್ಷ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಗ್ಯಾರೆಂಟಿ ಘೋಷಣೆ ಮಾಡಿದ್ದಾರೆ ಅದರಿಂದ ನಿಮ್ಮ ಬೆಂಬಲ ಕಾಂಗ್ರೆಸ್ ಪಕ್ಷದ ಮೇಲೆ ಇದ್ದು ಕೆ.ವಿ ಗೌತಮ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ನಾಗನಾಳ ಸೋಮಣ್ಣ, ಜಿಲ್ಲಾ ಸಹಕಾರಿ ಹಾಗೂ ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗದ್ದೆಕಣ್ಣೂರು ದಯಾನಂದ್, ಮುಖಂಡರಾದ ಉದಯಶಂಕರ್, ಮೈಲಾಂಡಹಳ್ಳಿ ಮುರಳಿ, ಖಾಜಿಕಲ್ಲಹಳ್ಳಿ ಮುನಿರಾಜು, ನಾರಾಯಣಸ್ವಾಮಿ, ಸತೀಶ್, ಮುಖಂಡರು ಇದ್ದರು

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

9 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

15 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

1 day ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago