ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವು ಚುನಾವಣೆಗೆ ಮುನ್ನ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿರುವುದರಿಂದ ಜನರ ಮನಸ್ಸಿನಲ್ಲಿ ಕಾಂಗ್ರೆಸ್ ಬಡವರ ಪಕ್ಷ ಎಂಬುದು ಮನದಟ್ಟಾಗಿದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ ಸರಕಾರದ ಗ್ಯಾರಂಟಿ ಯೋಜನೆಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆ ಎಂದು ತಿಳಿಸಿದರು
ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಾ ಇದ್ದು ಜನರ ವಿಶ್ವಾಸವನ್ನು ಪಡೆದಿದೆ ಅದೇ ರೀತಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಿ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರ ಹಿಡಿಯಲು ರಾಹುಲ್ ಗಾಂಧಿಯವರ ಕೈ ಬಲಪಡಿಸಬೇಕು ಕೋಲಾರ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ಸರಕಾರದಿಂದ ನಡೆದಿದೆ ಇಂತಹ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯಬೇಕು ಎಂದರೆ ಗೌತಮ್ ಅವರನ್ನು ಆಯ್ಕೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.
ಕೇಂದ್ರದಲ್ಲಿ ಮೋದಿ ಸರಕಾರ ಹತ್ತು ವರ್ಷಗಳಿಂದ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಬಿಜೆಪಿ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ ಒಂದಾದರೂ ಭರವಸೆಯನ್ನು ಈಡೇರಿಸಿದ್ದಾರಾ ಬಿಜೆಪಿಯನ್ನು ತೊಲಗಿಸಿ ಭ್ರಷ್ಟಾಚಾರ ರಹಿತ ಕಾಂಗ್ರೆಸ್ ಸರ್ಕಾರವನ್ನು ಜನತೆ ಆಯ್ಕೆ ಮಾಡಬೇಕಿದೆ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಪ್ರಾಮಾಣಿಕವಾಗಿ ನಿಮ್ಮ ಮನೆಯ ಮಗನ ರೀತಿಯಲ್ಲಿ ಕೆಲಸ ಮಾಡುತ್ತಾರೆ ನೀವು ಎಲ್ಲರೂ ಒಟ್ಟಾಗಿ ಗೆಲ್ಲಿಸುವ ಸಂಕಲ್ಪ ಮಾಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಂಎಲ್ಸಿ ನಸೀರ್ ಅಹಮದ್ ಮಾತನಾಡಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಮುಂದಿನ ರಾಜಕೀಯ ಅಸ್ತಿತ್ವಕ್ಕಾಗಿ ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ ಬಿಜೆಪಿಗೆ ಜನರ ನೆಮ್ಮದಿಯ ಜೀವನ ಬೇಕಾಗಿಲ್ಲ ಅವರಿಗೆ ಅಭಿವೃದ್ಧಿಯೇ ಬೇಡ ತಮ್ಮ ಅಧಿಕಾರದ ಆಸೆಗಾಗಿ ಕೋಮುಗಲಭೆಗಳ ಮೂಲಕ ಭಾವನಾತ್ಮಕ ವಿಚಾರಗಳನ್ನು ಮುಂದೆ ತಂದಿದ್ದಾರೆ ಜನ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಮೂಲಕ ಲೋಕಸಭಾ ಚುನಾವಣೆಯಲ್ಲಿ ಗೌತಮ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು.
ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ದೇಶದಲ್ಲಿ ಮೋದಿ ಸರಕಾರವು ಅದಾನಿ, ಅಂಬಾನಿ ಪರ ಆಡಳಿತ ನಡೆಸುವ ಮೂಲಕ ಬಡವರು, ಕೂಲಿ, ಕಾರ್ಮಿಕರು ಹಾಗೂ ಸಾಮಾನ್ಯ ಜನರನ್ನು ಬೀದಿಗೆ ತಳ್ಳುತ್ತಿದ್ದಾರೆ. ದೇಶದ ಜನರು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಈ ಚುನಾವಣೆಯಲ್ಲಿ ಕಲಿಸಲಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಬರುವುದು ಖಚಿತ. ರಾಜ್ಯದಲ್ಲಿ ಕೂಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಸ್ಥಾನ ಪಡೆಯುವುದು ನಿಶ್ಚಿತವಾಗಿದ್ದು ಕೋಲಾರದಲ್ಲಿ ಕಳೆದ ಬಾರಿ ಸೋಲಿಗೆ ಈ ಬಾರಿ ಗೆಲುವು ವರವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಮಾತನಾಡಿ ಕಾಂಗ್ರೆಸ್ ಪಕ್ಷವು ನನ್ನಂತಹ ಸಾಮಾನ್ಯ ವ್ಯಕ್ತಿಗೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಡಿದೆ ಕಾಂಗ್ರೆಸ್ ವರಿಷ್ಠರ ಹಾಗೂ ಕಾಂಗ್ರೆಸ್ ಮುಖಂಡರ ಕಾರ್ಯಕರ್ತರ ನಂಬಿಕೆ ಉಳಿಸುವ ಕೆಲಸವನ್ನು ಮಾಡುತ್ತೇನೆ ನನಗೆ ನಿಮ್ಮಗಳ ಸೇವೆ ಮಾಡಲು ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲಕ್ಷ್ಮೀನಾರಾಯಣ, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ನಗರಸಭೆ ಸದಸ್ಯರಾದ ಮುರಳಿಗೌಡ, ಆಫ್ಸರ್, ಮಂಜುನಾಥ್, ಕುರಿಗಳ ರಮೇಶ್, ಸೂರಿ, ಶಫಿ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ರಾಜಪ್ಪ, ಸೋಮಶೇಖರ್, ಐಯ್ಯ, ಚಂದ್ರಮೌಳಿ, ರಾಮಯ್ಯ, ಗಂಗಣ್ಣ, ಶಾಸ್ತ್ರೀ ಮುಂತಾದವರು ಇದ್ದರು
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…