ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆ ‘ಕೈ’ ಪಾಳಯದ ಟಿಕೆಟ್ ಆಕಾಂಕ್ಷಿಗಳ ಮಧ್ಯೆಯೇ ಭಿನ್ನಮತ ಸ್ಫೋಟಿಸುವ ಸಾಧ್ಯತೆ ಕಂಡುಬಂದಿದೆ.
ಹಾಲಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಕೆಪಿಸಿಸಿ ರಾಜ್ಯ ನಾಯಕರ ನಡೆಗೆ ಬೇಸತ್ತಿರುವ ಸ್ಥಳೀಯ ಸ್ವಾಭಿಮಾನಿ ಕಾಂಗ್ರೆಸ್ಸಿಗರೆಂದು ಬಿಂಬಿಸಿಕೊಂಡಿರುವ ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ನಾಳೆ ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಮೂಲ ಕಾಂಗ್ರೆಸ್ಸಿಗ ಹಾಗೂ ಹಿರಿಯ ನಾಯಕ ತಿ.ರಂಗರಾಜು ಹಾಗೂ ಇತರ ಬೆಂಬಲಿಗರು ನಾಳಿನ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದು, ಮುಂದಿನ ನಡೆ ಏನಾಗಲಿದೆ ಎಂಬ ಕುತೂಹಲ ಮೂಡಿದೆ.
2023 ಸಾರ್ವತ್ರಿಕ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿ ಈಗಾಗಲೇ ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆ ನಾಳಿನ ಪತ್ರಿಕಾಗೋಷ್ಠಿ ಮಹತ್ವ ಪಡೆದುಕೊಂಡಿದೆ, ನಾಳೆ ಮಧ್ಯಾಹ್ನ 3 ಗಂಟೆಗೆ ನಗರದ ಪ್ರವಾಸಿ ಮಂದಿರ ಸರ್ಕಲ್ ( ಟಿ.ಬಿ ಸರ್ಕಲ್) ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿರುವ JCN ಕನ್ವೆನ್ಷನ್ ಹಾಲ್ ನಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗಿದೆ.
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…