ನಿರೀಕ್ಷೆಯಂತೆಯೇ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರವನ್ನು ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಹಂಚಿಕೊಂಡಿದೆ. ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬಿಜೆಪಿ – ಜೆಡಿಎಸ್ ಮೈತ್ರಿಗೆ ನಗರಸಭೆ ಚುಕ್ಕಾಣಿ ದೊರೆತಿದೆ.
ಸೋಮವಾರ ನಗರದ ನಗರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೊದಲೇ ಅಧಿಕಾರ ಹಂಚಿಕೆಯ ಒಪ್ಪಂದ ಮಾಡಿಕೊಂಡಿದ್ದವು. ಈ ಪ್ರಕ್ರಿಯೆ ಸುಗಮವಾಗಿ ಸಾಗುವ ಮೂಲಕ ಅಧ್ಯಕ್ಷ ಸ್ಥಾನವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವುದಕ್ಕಾಗಿ ಶಾಸಕ ಧೀರಜ್ ಮುನಿರಾಜು ರಣತಂತ್ರ ರೂಪಿಸಿದ್ದರು. ನಿರೀಕ್ಷೆಯಂತೆಯೇ ಅಧ್ಯಕ್ಷ ಸ್ಥಾನ ಬಿಜೆಪಿಗೆ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್‌ಗೆ ದೊರಕಿದೆ.
ಅಧ್ಯಕ್ಷ ಸ್ಥಾನಕ್ಕೆ ಕಮಲ-ದಳ ಮೈತ್ರಿಯಿಂದ ಸ್ಪರ್ಧಿಸಿದ್ದ ಸುಮಿತ್ರ ಆನಂದ್ (ಬಿಜೆಪಿ) ಅವರಿಗೆ ಸಂಸದ ಮತ್ತು ಶಾಸಕ ಇಬ್ಬರ ಮತ ಸೇರಿ 23 ಮತಗಳು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸ್ಥಾನಕ್ಕೆ ರೂಪಿಣಿ ಮಂಜುನಾಥ್ 10 ಮತಗಳು ದೊರೆತಿದ್ದು, 23 ಮತಗಳನ್ನು ಪಡೆದ ಸುಮಿತ್ರ ಆನಂದ್ ಅವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಕಮಲ-ದಳ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲೇಶ್ (ಜೆಡಿಎಸ್) ಅವರಿಗೆ ಸಂಸದ ಮತ್ತು ಶಾಸಕ ಇಬ್ಬರ ಮತ ಸೇರಿ 23 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಆನಂದ್ ಅವರಿಗೆ 10 ಮತಗಳು ದೊರೆತಿದ್ದು, 23 ಮತಗಳನ್ನು ಪಡೆದ ಮಲ್ಲೇಶ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ವಿಪ್ ಜಾರಿ
ಚುನಾವಣೆ ಹಿನ್ನಲೆಯಲ್ಲಿ ಮೂರು ಪಕ್ಷಗಳಿಂದ ವಿಪ್ ಜಾರಿ ಮಾಡಲಾಗಿತ್ತು. ಈ ಪೈಕಿ ಇಬ್ಬರು ಸದಸ್ಯರು ವಿಪ್ ಉಲ್ಲಂಘನೆ ಮಾಡಿ ಮತದಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸೇರ್ಪಡೆಯಾಗಿದ್ದ ಎಂ.ಜಿ ಶ್ರೀನಿವಾಸ್ ಹಾಗೂ ಜೆಡಿಎಸ್ ನ ಹಸೀನತಾಜ್ ವಿಪ್ ಉಲ್ಲಂಘನೆ ಮಾಡಿದ್ದಾರೆ. ಇತ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಶಿವಶಂಕರ್ ಹಾಗೂ ಶಿವಣ್ಣ ವಿಪ್‌ಗೆ ಮನ್ನಣೆ ಮಾಡಿ ಬಿಜೆಪಿ ಅಭ್ಯರ್ಥಿಗೆ ಮತನೀಡಿದ್ದಾರೆ.
ನಗರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸಂಸದ ಡಾ.ಕೆ.ಸುಧಾಕರ್ ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಲಭಿಸಿರುವುದು ಸಂತಸದ ವಿಷಯ. ಮತ್ತೆ ನಮ್ಮ ಹಿರಿಮೆ ಗರಿಮೆ ಹೆಚ್ಚಾಗಿದೆ. ಜವಾಬ್ದಾರಿ ಮತ್ತಷ್ಟು ವೃದ್ಧಿಸಿದೆ. ನಗರದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ತಂದುಕೊಡುವಲ್ಲಿ ಶ್ರಮಿಸುತ್ತೇನೆ. ದೊಡ್ಡಬಳ್ಳಾಪುರ ನಗರವನ್ನು ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಉಪಗ್ರಹ ನಗರವನ್ನಾಗಿ ಮಾಡಬೇಕು. ಸುರಕ್ಷಿತ, ಸುಂದರ ನಗರವನ್ನಾಗಿ ಮಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ನಂತರ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಬಿಜೆಪಿಯ 12 ಮಂದಿ ಸದಸ್ಯರು, ಜೆಡಿಎಸ್ ನ 6ಮಂದಿ ಸದಸ್ಯರು, ಮೂರು ಮಂದಿ ಪಕ್ಷೇತರರ ಸಹಕಾರದಿಂದ ಇಂದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ನಗರಸಭೆ ಚುಕ್ಕಾಣಿ ಹಿಡಿದಿದ್ದಾರೆ.
ಇಂದು ಬಿಜೆಪಿಗೆ ಒಳ್ಳೆಯ ದಿನ. ಡಾ.ಕೆ.ಸುಧಾಕರ್ ಅವರು ಸಂಸದರಾದ ಮೇಲೆ ತಾಲೂಕಿನಲ್ಲಿ ಬಿಜೆಪಿ ಮತ್ತಷ್ಟು ಬಲಗೊಳ್ಳುತ್ತಿದೆ. ಅವರು ಕಾಲಿಟ್ಟ ಕಡೆ ಸಿಹಿಸುದ್ಧಿ ಕೇಳುತ್ತಿದ್ದೇವೆ ಎಂದು ಹೇಳಿದರು.
ಬಿಜೆಪಿ ಎಲ್ಲಾ ಮುಖಂಡರು, ನಗರಸಭೆ ಸದಸ್ಯರು, ಮೈತ್ರಿಕೂಟದ ಮುಖಂಡರ ಸಹಕಾರದಿಂದ ಇಂದು ನಾನು ನಗರಸಭೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದೇನೆ. ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ನಗರವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸ ಮಾಡುತ್ತೇನೆ ಎಂದು ನಗರಸಭೆ ನೂತನ ಅಧ್ಯಕ್ಷೆ ಸುಮಿತ್ರ ಆನಂದ್ ಹೇಳಿದರು.
ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ವೆಂಕಟೇಶ್ ಸೇರಿದಂತೆ ಜೆಡಿಎಸ್, ಬಿಜೆಪಿ ಮುಖಂಡರು, ಕಾರ್ಯಕರ್ತರು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಅಭಿನಂದಿಸಿದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…