ತೂಬಗೆರೆ ಹೋಬಳಿಯ ಘಾಟಿ ಗ್ರಾಮದ ಕೆಲ ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು, ನಾನು 7 ವರ್ಷಗಳ ಕಾಲ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದೆ. ನಾನು ಎಂದೂ ಇವರ ಮೂಖ ನೋಡಿಲ್ಲ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಎಂದೂ ಇವರು ಗುರುತಿಸಿಕೊಂಡಿಲ್ಲ. ಕಾಂಗ್ರೆಸ್ ಪಕ್ಷಕ್ಕೂ ಇವರಿಗೂ ಯಾವುದೇ ಸಂಬಂಧವಿಲ್ಲ. ಯಾರೋ ಜೆಡಿಎಸ್ ಗೆ ಸೇರಿರಬಹುದು ಅಷ್ಟೇ. ನಮ್ಮ ಪಕ್ಷದವರಂತೂ ಜೆಡಿಎಸ್ ಗೆ ಸೇರ್ಪಡೆಗೊಂಡಿಲ್ಲ ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಶ್ರೀ ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ ತಿಳಿಸಿದರು.
ತೂಬಗೆರೆ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ನಮ್ಮ ಕಾರ್ಯಕರ್ತರು ಬೇರೆ ಪಕ್ಷಕ್ಕೆ ಸೇರುವ ಪ್ರಮೇಯವೇ ಇಲ್ಲ. ಜೆಡಿಎಸ್ ನವರು ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಗೆ ಸೇರಿದ್ದಾರೆ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆ ಜೆಡಿಎಸ್ ಗಿಮಿಕ್ ಮಾಡಲು ಹೊರಟಿದೆ ಎಂದು ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ಹೇಳಿದ್ದಾರೆ.
ಜೆಡಿಎಸ್ ಗೆ ಸೇರಿದ್ದಾರೆ ಎನ್ನಲಾದ ಯುವಕರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಅಲ್ಲ. ಜೆಡಿಎಸ್ ನವರು ಕಾಂಗ್ರೆಸ್ ಹೆಸರನ್ನು ದುರಪಯೋಗಪಡಿಸಿಕೊಳ್ಳುತ್ತಿದೆ. ಜೆಡಿಎಸ್ ನ ಹುನ್ನಾರ ಮಾಡಲಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್ ಹೇಳಿದರು.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…