ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ದುರಾಡಳಿತವನ್ನು ಜನರಿಗೆ ತಿಳಿಯುವಂತೆ ಮಾಡುವ ಜೊತೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕಾಗಿದೆ ಇಂತಹ ಒಳ್ಳೆಯ ಅವಕಾಶವನ್ನು ಪಕ್ಷದ ಕಾರ್ಯಕರ್ತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ತಿಳಿಸಿದರು.
ತಾಲೂಕಿನ ಲಕ್ಷ್ಮೀಸಾಗರದ ತಮ್ಮ ತೋಟದಲ್ಲಿ ಭಾನುವಾರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನರಸಾಪುರ ಹೋಬಳಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವು ಬಲಿಷ್ಠವಾಗಿದೆ ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ ಅಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಿ ನಾಯಕರಾಗಿ ಗುರುತಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಾಯಕತ್ವದಲ್ಲಿ ಈ ಬಾರಿಯೂ ಎನ್.ಡಿ.ಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಈ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ದೇಶದ ಭವಿಷ್ಯದ ದೃಷ್ಟಿಯಿಂದ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಬೇಕು ಜನರಿಗೆ ನ್ಯಾಯ ಕೊಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಯಾವುದೇ ವಿಚಾರದಲ್ಲಿ ಆಗಲಿ ನಾವು ಕಾರ್ಯಕರ್ತರ ಯೋಗಕ್ಷೇಮದಲ್ಲಿ ನಿಮ್ಮೊಂದಿಗೆ ಇರುತ್ತೇವೆ ಒಟ್ಟಾಗಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡೋಣ ಮುಂದಿನ ದಿನಗಳಲ್ಲಿ ಎಲ್ಲರಿಗೂ ಒಳ್ಳೆಯದು ಆಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಲೋಕಸಭಾ ಚುನಾವಣೆ ಇನ್ನೂ ಕೆಲವೇ ದಿನಗಳಲ್ಲಿ ಬರುತ್ತದೆ ಯಾರೇ ಅಭ್ಯರ್ಥಿಯಾಗಲಿ ಗೆಲುವು ಮಾತ್ರ ಮೈತ್ರಿಕೂಟಕ್ಕೆ ಎಂಬ ರೀತಿಯಲ್ಲಿ ಕೆಲಸ ಮಾಡೋಣ ಹಿಂದೆ ಸಾಕಷ್ಟು ತಪ್ಪುಗಳು ಆಗಿರಬಹುದು ಅವುಗಳನ್ನು ಮರೆತು ಒಗ್ಗಟ್ಟಿನಿಂದ ಒಮ್ಮತದಿಂದ ಚುನಾವಣೆಯನ್ನು ಎದುರಿಸೋಣ ಕಾಂಗ್ರೆಸ್ ಬಿಟ್ಟಿ ಗ್ಯಾರಂಟಿಗಳಿಗೆ ಚುನಾವಣೆ ಮುಗಿದ ನಂತರ ವಾರಂಟಿ ಇಲ್ಲ ಅದರಿಂದಾಗಿ ಭವ್ಯ ಭಾರತ ನಿರ್ಮಾಣ ಮಾತ್ರ ಎನ್.ಡಿ.ಎ ಮೈತ್ರಿ ಕೂಟದಿಂದ ಮಾತ್ರ ಸಾಧ್ಯವಾಗುತ್ತದೆ ಎಂಬುದು ಜನಕ್ಕೆ ತಿಳಿಸೋಣ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದರೂ ಜಿಲ್ಲೆಯಲ್ಲಿ ನಾಲ್ಕು ಜನ ಶಾಸಕರು ಇದ್ದಾರೆ ಆದರೆ ಜಿಲ್ಲೆಗೆ ಯಾವುದೇ ಗುರುತರವಾದ ಬಜೆಟ್ ತರಲು ಸಾಧ್ಯವಾಗಲಿಲ್ಲ ಸಿದ್ದರಾಮಯ್ಯ ಕೋಲಾರಕ್ಕೆ ಬರುವ ನೆಪದಲ್ಲಿ ತೇರಹಳ್ಳಿ ಬೆಟ್ಟಕ್ಕೆ ರಸ್ತೆ ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಮಾಡಲಿಲ್ಲ ಇವತ್ತು ವಾರ್ಡ್ ಗಳ ಎಲ್ಲವೂ ಸ್ಲಂಗಳಾಗಿವೆ ಸರಕಾರ, ಜಿಲ್ಲಾಡಳಿತ, ಜನಪ್ರತಿನಿಧಿಗಳ ಮಧ್ಯೆ ಸಮನ್ವಯತೆ ಕೊರತೆಯಿಲ್ಲದೇ ಅಭಿವೃದ್ಧಿ ಶೂನ್ಯವಾಗಿದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಜನ ಕಲಿಸಲಿದ್ದಾರೆ ಎಂದ ಅವರು ಇದೇ ರೀತಿಯಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮಗಳಲ್ಲಿ ಸಭೆಗಳನ್ನು ಮಾಡಿ ಮೈತ್ರಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮಾತನಾಡಿ ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳ ಮಧ್ಯೆಯೇ ನೇರ ಹಣಾಹಣೆ ಇದ್ದು ಕೇವಲ ನಾಯಕರು ಅಷ್ಟೇ ಸಮನ್ವಯತೆ ಸಾಧಿಸಿದರೆ ಸಾಲದು ಗ್ರಾಮಗಳಲ್ಲಿನ ಎರಡು ಪಕ್ಷದ ಮುಖಂಡರ ಮಧ್ಯೆ ಸಮನ್ವಯತೆ ಸಾಧಿಸುವಂತೆ ಸಭೆಗಳನ್ನು ಮಾಡಬೇಕು ಕಾಂಗ್ರೆಸ್ ಸರಕಾರದಲ್ಲಿನ ಅಧಿಕಾರಿಗಳು ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಾರೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಜೊತೆಗೆ ಪಕ್ಷದ ಸಂಘಟನೆ ಬಗ್ಗೆ ಕಾರ್ಯಕರ್ತರೊಂದಿಗೆ ನಾಯಕರು ಕೈ ಜೋಡಿಸಬೇಕು ಯುವಕರಿಗೆ ಪಕ್ಷದಲ್ಲಿ ಜವಾಬ್ದಾರಿ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬು ಮೌನಿ, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀಸಾಗರ ಸುನಿಲ್ ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ವಕೀಲರ ಸಂಘದ ಅಧ್ಯಕ್ಷ ಬೆಗ್ಲಿ ಮುನೇಗೌಡ, ಜೆಡಿಎಸ್ ಎಸ್ಸಿ ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಬೆಳಮಾರನಹಳ್ಳಿ ಗ್ರಾಪಂ ಉಪಾಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಖಾಜಿಕಲ್ಲಹಳ್ಳಿ ಹರೀಷ್ ಗೌಡ, ತಿರುಮಲೇಶ್, ಕಡಗಟ್ಟೂರು ವಿಜಯಕುಮಾರ್, ಬೆಳಮಾರನಹಳ್ಳಿ ಚಂದ್ರು, ತ್ಯಾಗರಾಜ್, ಲೋಕೇಶ್ ಮರಿಯಪ್ಪ, ತೋಟಗಳ ಅಶೋಕ್, ಯಲ್ಲಮ್ಮ, ಉದ್ದಪ್ಪನಹಳ್ಳಿ ಶೇಖರ್, ದೇವರಾಜ್, ಮಸಾಲೆ ಅಂಜಿನಪ್ಪ, ಸುದರ್ಶನ್, ಮೋಹನ್ ಮುಂತಾದವರು ಇದ್ದರು
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…