ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ “ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ” ಜಾಗೃತ ಕಾರ್ಯಗಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು.
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗುತ್ತಿರುವ ಸಮಸ್ಯೆಗಳು, ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ಮತದಾನದ ಮಹತ್ವದ ಬಗ್ಗೆ ಜನಜಾಗೃತಿ ಮೂಡಿಸುವುದುರ ಜೊತೆಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕುರಿತು ಕಾರ್ಯಾಗಾರದಲ್ಲಿ ಸವಿಸ್ತಾರ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಸಚಿವರಾದ ಹೆಚ್.ಕೆ.ಪಾಟೀಲ, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ, ಈಶ್ವರ್ ಖಂಡ್ರೆ ಅವರು ಸೇರಿದಂತೆ ಸಂಪುಟದ ಎಲ್ಲಾ ಸಚಿವರುಗಳು, ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಹಿರಿಯ ಮುಖಂಡರುಗಳು ಉಪಸ್ಥಿತರಿದ್ದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…