ಕೋಲಾರ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಹಾಸನದಲ್ಲಿ ನಡೆದ ಸ್ವಾಭಿಮಾನ ಸಮಾವೇಶವು ರಾಜ್ಯದ ಜನತೆಯನ್ನು ಯಾಮಾರಿಸಿದ ಸಮಾವೇಶವಾಗಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಮಾವೇಶ ನಡೆಸುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ವ್ಯಂಗ್ಯ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯದ ಅಭಿವೃದ್ಧಿಗೆ ಸುಮಾರು 56 ಸಾವಿರ ಕೋಟಿ ಅನುದಾನ ಬಿಡುಗಡೆ ಎಂದು ಪ್ರಚಾರ ಮಾಡಿದಿದ್ದಾರೆ. ಪ್ರತಿ ಕ್ಷೇತ್ರಕ್ಕೆ ಎಷ್ಟು ಕೊಟ್ಟಿದ್ದಾರೆ ಕ್ಷೇತ್ರದ ಶಾಸಕರು ಬಹಿರಂಗ ಪಡಿಸಲಿ. ಸ್ವಾಭಿಮಾನ ಸಮಾವೇಶವು ರಾಜ್ಯಕ್ಕೆ ಅವಮಾನ ಮಾಡಿದ್ದಾರೆ ಸರ್ಕಾರದಲ್ಲಿ ಹಣ ಇಲ್ಲ ಎಂದು ಸ್ವಪಕ್ಷದ ಶಾಸಕರೇ ಹೇಳಿಕೊಂಡಿದ್ದಾರೆ ಜನರನ್ನು ಯಾಮಾರಿಸಬೇಡಿ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮುಸ್ಲಿಂ ಸಮುದಾಯವೇ ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ಅದರಲ್ಲೂ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟು ಬೇರೆಯವರಿಗೆ ಮತ ಹಾಕಲ್ಲ ಅಂತಹದರಲ್ಲಿ ಮುಸ್ಲಿಂ ಸಮುದಾಯವು ಯಾಕೆ ಮುಖ್ಯಮಂತ್ರಿ ಸ್ಥಾನವನ್ನು ಕೇಳಬಾರದು? ಮುಸ್ಲಿಮ್ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟು ರಾಷ್ಟ್ರಕ್ಕೆ ಸಂದೇಶವನ್ನು ನೀಡಲಿ. ಕಾಂಗ್ರೆಸ್ ಪಕ್ಷದಲ್ಲಿ ಕೆ.ಹೆಚ್ ಮುನಿಯಪ್ಪ ಅಂತಹ ಹಿರಿಯರು, ನಿಷ್ಠಾವಂತರು ಇದ್ದು ಅಂತವರಿಗೆ ಸಿಎಂ ಸ್ಥಾನ ಕೊಡಲು ಸಮುದಾಯಗಳು ಪ್ರಶ್ನೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಹಾಸನ ಸಮಾವೇಶನಕ್ಕೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೊಂದರೆ ಕೊಡಲಿಲ್ಲ, ಮಂಡ್ಯದಲ್ಲಿ ಜೆಡಿಎಸ್ ಪಕ್ಷದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭಕ್ಕೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೆ ಮೆಣಸಿನಕಾಯಿ ಇಟ್ಟುಕೊಂಡತೆ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸ್ವಾಭಿಮಾನ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ರಾಜಕೀಯ ಗುರು ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಉದ್ದುದ್ದವಾಗಿ ಭಾಷಣ ಮಾಡಿದ್ದಾರೆ ಸಿದ್ದರಾಮಯ್ಯ ಜೊತೆಗೆ ಇದ್ದ ಹಿರಿಯರನ್ನು ಏನು ಮಾಡಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಸಚಿವ ಸಂಪುಟದ ಸಚಿವರು ಸಿದ್ದರಾಮಯ್ಯ ಮೇಲಿನ ಆರೋಪಕ್ಕೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. ಇಡಿ ಇಲಾಖೆ ಸೇರಿದಂತೆ ಕೋರ್ಟ್ ಅದೇಶಕ್ಕೆ ತಲೆ ಬಾಗಬೇಕು. ಸಿದ್ದರಾಮಯ್ಯ ಅವರು ಅಧಿಕಾರಕಾದ ದುರಾಸೆಯಿಂದ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳನ್ನು ಮುಚ್ಚಿಟ್ಟುಕೊಳ್ಳಲು ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಹೇಳಿದ್ದಾರೆ.
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…