ಕಾಂಗ್ರೆಸ್ ನಿಂದ ರಾಜ್ಯದ ಜನರಿಗೆ ಗ್ಯಾರಂಟಿ ಸೌಲಭ್ಯ ಹೆಸರಲ್ಲಿ ಮೋಸ: ನಗರದಲ್ಲಿ ಮಾಜಿ ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೊಂದಲ‌ ಸೃಷ್ಟಿಯಾಗಿದೆ. ಗ್ಯಾರಂಟಿ ಕಾರ್ಡ್ ಹೆಸರಲ್ಲಿ ಗೆದ್ದಿರುವ ಸರ್ಕಾರವು ಜನರಿಗೆ ಗ್ಯಾರಂಟಿ ಸೌಲಭ್ಯ ತಲುಪಿಸುವಲ್ಲಿ ವಿಫಲವಾಗುತ್ತಿದೆ. ಜನರಿಂದ ಟ್ಯಾಕ್ಸ್ ಮೂಲಕ ಹಣ ಪಡೆದು ನಮ್ಮ ಸರ್ಕಾರ ಎಲ್ಲಾ ಫ್ರೀ ನೀಡುತ್ತದೆ ಎಂದು ನಂಬಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ನಗರದ ಡಿಕ್ರಾಸ್ ಬಳಿ ಶಾಸಕ ಧೀರಜ್ ಮುನಿರಾಜ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಸ್ಕಾಂ ಡೆಪಾಸಿಟ್ ದರ ಶೇ.65ರಷ್ಟು ಹೆಚ್ಚು ಮಾಡಲಾಗಿದೆ. ಗ್ಯಾರಂಟಿ ಸೌಲಭ್ಯ ಘೋಷಣೆ ವೇಳೆ ಯಾವ ಮಾನದಂಡ ಅನುಸರಿಸಲಿಲ್ಲ, ಈಗ ಗೆದ್ದು ಅಧಿಕಾರಕ್ಕೆ ಬಂದ ಮೇಲೆ ಆಧಾರ್ ಕಾರ್ಡ್,‌ ಪಾನ್ ಕಾರ್ಡ್, ಜಿಎಸ್ ಟಿ ಬಿಲ್ ಸೇರಿದಂತೆ ಇತರೆ ಮಾನದಂಡಗಳನ್ನು ಜನರ ಮೇಲೆ ಹೇರಿ ಗ್ಯಾರಂಟಿ ಸೌಲಭ್ಯ ಜನರಿಗೆ ತಲುಪದ ರೀತಿ ಮಾಡಲಾಗುತ್ತಿದೆ ಎಂದರು.

ಸಚಿವ ಚೆಲುವರಾಯಸ್ವಾಮಿ ಹೇಳಿದ ಹಾಗೆ ನಾವು ವೋಟ್ ಗಾಗಿ ಗ್ಯಾರಂಟಿ ಸೌಲಭ್ಯ ಗಿಮಿಕ್ ಮಾಡಿದ್ದೇವೆ ಎಂದಿದ್ದಾರೆ. ಅವರು ಹೇಳಿದಾಗೆ ಗಿಮಿಕ್ ಮಾಡಿ ಜನರಿಗೆ ಟೋಪಿ ಹಾಕುವ ಕೆಲಸ ಮಾಡಿದ್ದಾರೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಗುಡುಗಿದ್ದಾರೆ.

ಈ ಹಿಂದೆ ಜೆಡಿಎಸ್ ಜೊತೆ ನಾವಷ್ಟಕ್ಕೆ ನಾವೆ ಹೋಗಿ ಮೈತ್ರಿ ಮಾಡಿ ಸರ್ಕಾರ ರಚನೆ ಮಾಡಿಲ್ಲ, ಜೆಡಿಎಸ್ ನವರೆ ಬಂದು ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಸಿಎಂ ಆಗಿದ್ದು, ನಮಗೆ ಸಿಎಂ ಸ್ಥಾನ ನಮಗೆ ಬಿಟ್ಟುಕೊಟ್ಟಿದ್ದರೆ ಅದು ದಾನ ಮಾಡಿದ ಹಾಗೆ ಎಂದು ತಿಳಿಸಿದರು.

Ramesh Babu

Journalist

View Comments

  • E lofer BJP yavaru yen sachana , brastarige brasta nanmaklu, papa avaru yeno kodtavre, uri atikondide avarigella ,

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

7 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

8 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

16 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

21 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago