ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ- ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ ಎಂದರು.

ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಕರ್ನಾಟಕ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದಿದ್ದಾರೆ.

ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

44 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

58 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

5 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

7 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

10 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

14 hours ago