2023ರ ಕರ್ನಾಟಕ ರಾಜ್ಯ ಚುನಾವಣೆ ಹಿನ್ನೆಲೆ, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ.ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು.
‘ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್ ಬದ್ದತೆ’ ಎಂಬ ಘೋಷವಾಕ್ಯದಡಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಪ್ರಣಾಳಿಕೆಯ ಪ್ರಮುಖ ಅಂಶಗಳು
1. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್
2. ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
3. ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ,
4. ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
5. ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ, ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ,
6. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ
7. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧದ ಭರವಸೆ
8. ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ,
9. ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ,
10. ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ,
11. ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ,
12. ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ,
13. ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ,
14. ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ,
15. ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆ
16. ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ,
17. ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ,
18. ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ, NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ,
19. ಸರ್ಕಾರದಿಂದಲೇ ಮನೆಗಳ ನಿರ್ಮಾಣ, ಮಂಗಳಮುಖಿರಿಗಾಗಿ ಮಂಡಳಿ ಸ್ಥಾಪನೆ (100 ಕೋಟಿ ಅನುದಾನ),
20. ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ,
21. ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು (ಪತ್ರಕರ್ತರಿಗೆ ಸಾಮಾಜಿಕ ಭದ್ರತಾ ಯೋಜನೆ ಜಾರಿ,
22. ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ), SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.
23. ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ,
24. ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ, ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ,
25. ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ,
26. ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ,
27. ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ (ಎಸ್.ಸಿ ಮೀಸಲಾತಿ ಶೇ.17ಕ್ಕೆ ಏರಿಕೆ,
28. ಎಸ್.ಟಿ ಮೀಸಲಾತಿ ಶೇ. 7ಕ್ಕೆ ಏರಿಕೆ. ಅಲ್ಪ ಸಂಖ್ಯಾತರಿಗೆ ಶೇ.4 ರ ಮೀಸಲಾತಿ ಮರು ಸ್ಥಾಪನೆ,
29. ಹಿಂದುಳಿದ ವರ್ಗಗಳ ಜನಗಣತಿ ವರದಿ ಅನುಷ್ಠಾನ
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…