Categories: ರಾಜ್ಯ

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

2023ರ ಕರ್ನಾಟಕ ರಾಜ್ಯ ಚುನಾವಣೆ‌ ಹಿನ್ನೆಲೆ, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ.ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು.

‘ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್‌ ಬದ್ದತೆ’ ಎಂಬ ಘೋಷವಾಕ್ಯದಡಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಪ್ರಣಾಳಿಕೆಯ ಪ್ರಮುಖ‌ ಅಂಶಗಳು

1. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​

2. ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ

3. ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ,

4. ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು

5. ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ, ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ,

6. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ

7. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧದ ಭರವಸೆ

8. ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ,

9. ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ,

10. ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ,

11. ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ,

12. ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ,

13. ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ,

14. ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ,

15. ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಭರವಸೆ

16. ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ,

17. ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ,

18. ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ, NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ,

19. ಸರ್ಕಾರದಿಂದಲೇ ಮನೆಗಳ ನಿರ್ಮಾಣ, ಮಂಗಳಮುಖಿರಿಗಾಗಿ ಮಂಡಳಿ ಸ್ಥಾಪನೆ (100 ಕೋಟಿ ಅನುದಾನ),

20. ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ,

21. ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು (ಪತ್ರಕರ್ತರಿಗೆ ಸಾಮಾಜಿಕ ಭದ್ರತಾ ಯೋಜನೆ ಜಾರಿ,

22. ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ), SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.

23. ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ,

24. ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ, ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ,

25. ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ,

26. ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ,

27. ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ (ಎಸ್.ಸಿ ಮೀಸಲಾತಿ ಶೇ.17ಕ್ಕೆ ಏರಿಕೆ,

28. ಎಸ್.ಟಿ ಮೀಸಲಾತಿ ಶೇ. 7ಕ್ಕೆ ಏರಿಕೆ. ಅಲ್ಪ ಸಂಖ್ಯಾತರಿಗೆ ಶೇ.4 ರ ಮೀಸಲಾತಿ ಮರು ಸ್ಥಾಪನೆ,

29. ಹಿಂದುಳಿದ ವರ್ಗಗಳ ಜನಗಣತಿ ವರದಿ ಅನುಷ್ಠಾನ

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

6 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

7 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

10 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

12 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

17 hours ago