ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಲಕ್ಷ್ಮಿಪತಿ ಹುಟ್ಟುಹಬ್ಬ ಆಚರಣೆ: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ- ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್ ವಿ

ನಾಳೆ(ಅ.12) ದೊಡ್ಡಬಳ್ಳಾಪುರ ತಾಲೂಕಿನ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ ವಕ್ತಾರ ಲಕ್ಷ್ಮಿಪತಿ ಅವರ ಹುಟ್ಟುಹಬ್ಬ ಆಚರಣೆ.

ಲಕ್ಷ್ಮಿಪತಿ ಅವರ ಹುಟ್ಟುಹಬ್ಬ ಆಚರಣೆ ಮಾಡಲು ಈಗಾಗಲೇ ಸಕಲ‌ ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆ ನಾಳೆ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಕಾಂಗ್ರೆಸ್ ಮುಖಂಡರು,‌ ಕಾರ್ಯಕರ್ತರು, ಹಿತೈಶಿಗಳು ಸೇರಿದಂತೆ ಇತರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ವಕೀಲರು ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್ ವಿ ಮನವಿ ಮಾಡಿದ್ದಾರೆ.

ಅದೇರೀತಿ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ವಯೋವೃದ್ಧರಿಗೆ ಉಲ್ಲನ್ ಕಂಬಳಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು….

Leave a Reply

Your email address will not be published. Required fields are marked *

error: Content is protected !!