Categories: ಕೋಲಾರ

ಕಾಂಗ್ರೆಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು, ಇವರಿಂದ ಸಾಮಾನ್ಯ ಜನರಿಗೆ ಪ್ರಯೋಜನವಿಲ್ಲ- ಗಾಂಧಿನಗರ ನಾರಾಯಣಸ್ವಾಮಿ

ಕೋಲಾರ: ರಾಜ್ಯದ ಕಾಂಗ್ರೆಸ್ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದ್ದು, ಅವರ ಪರವಾದ ನೀತಿಗಳ ಜಾರಿಯಿಂದ ಸಾಮಾನ್ಯ ಜನರ ಬದುಕು ದುಸ್ತರಗೊಂಡಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಉರಗಲಿ ಗ್ರಾಪಂ ವ್ಯಾಪ್ತಿಯ ಸಿಪಿಐಎಂ ಶಾಖಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡವರ, ಕಾರ್ಮಿಕರ ಹಾಗೂ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿರುವ ಸರ್ಕಾರಗಳು ಸಾಮಾನ್ಯ ಜನರ ಜೀವನವನ್ನು ಕಷ್ಟಕ್ಕೆ ದೂಡುತ್ತಿವೆ. ಕೇಂದ್ರದಲ್ಲಿ ಹತ್ತು ವರ್ಷಗಳ ಬಿಜೆಪಿಯ ನರೇಂದ್ರ ಮೋದಿ ಆಡಳಿತವು ದೇಶದಲ್ಲಿ ಬದಲಾವಣೆ ತರುವುದಾಗಿ ಹೇಳಿ ಬರೀ ಸುಳ್ಳು ಭಾಷಣೆಗಳ ಮುಖಾಂತರ ದಾರಿ ತಪ್ಪಿಸುತ್ತಿದ್ದಾರೆ ಇದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರವು ಪ್ರಶ್ನಿಸುವ ಮನೋಭಾವ ಇಲ್ಲವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕಾರ್ಮಿಕರು ಹಾಗೂ ಎಲ್ಲಾ ದುಡಿಯುವ ವರ್ಗದ ಜನರ ರಕ್ಷಣೆಗೆ ಸಿಪಿಐಎಂ ಪಕ್ಷವು ಬದ್ಧವಾಗಿದ್ದು, ಆಳುವ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಹೋರಾಡಲು ಎಲ್ಲರೂ ಸಂಘಟಿತರಾಗಬೇಕು ಸಾಮಾನ್ಯ ಜನರ ಸಬ್ಸಿಡಿಗಳನ್ನು ಕಡಿತಗೊಳಿಸಲು ಸರ್ಕಾರಗಳು ಮುಂದಾಗಿದ್ದು ಇದರ ವಿರುದ್ದ ಧ್ವನಿಯಾಗಬೇಕು ಎಂದರು.

ಸಮ್ಮೇಳನದ ಧ್ವಜಾರೋಹಣವನ್ನು ಪಕ್ಷದ ಸದಸ್ಯ ಹನುಮಂತಪುರ ರಾಮಾಂಜಿನಪ್ಪ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖಾ ಕಾರ್ಯದರ್ಶಿ ವಿ.ನಾರಾಯಣರೆಡ್ಡಿ ವಹಿಸಿದ್ದರು ವೇದಿಕೆಯಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್, ಜಿಲ್ಲಾ ಸಮಿತಿ ಸದಸ್ಯೆ ಗಂಗಮ್ಮ, ತಾಲೂಕು ಸಮಿತಿ ಸದಸ್ಯ ಪಿ.ವಿ ರಮಣ್, ಉಪ್ಪುಕುಂಟೆ ಗ್ರಾಪಂ ಸದಸ್ಯ ಸೀನಪ್ಪ, ಗ್ರಾಮದ ಹಿರಿಯ ಮುಖಂಡ ಮುನಿವೆಂಕಟಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

50 minutes ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

3 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

14 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

14 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

15 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

17 hours ago