ಕೋಲಾರ: ಕಾಂಗ್ರೆಸ್ ಪಕ್ಷದಲ್ಲಿ ದೀನ ದಲಿತರ, ದುರ್ಬಲ ವರ್ಗದವರ, ಅಲ್ಪಸಂಖ್ಯಾತರ, ಕಾರ್ಮಿಕರು ಸೇರಿದಂತೆ ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಏಳಿಗೆಗಾಗಿ ದುಡಿಯುತ್ತಾ ಇದೆ. ವಿಶೇಷವಾಗಿ ಕಾರ್ಮಿಕ ಹಿತದೃಷ್ಟಿಯಿಂದ ಇಂಟಕ್ ಸಂಸ್ಥೆಯು ದುಡಿಯುತ್ತಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕ ರಾಜ್ಯ ಇಂಟಕ್ ಅಧ್ಯಕ್ಷ ಲಕ್ಷ್ಮೀವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಭಾನುವಾರ ಕಾರ್ಮಿಕರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವವರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದವರೇ ಹೆಚ್ಚು. ಹಿಂದಿನ ರಾಜ್ಯದ ಬಿಜೆಪಿ ಸರ್ಕಾರವು ಕಟ್ಟಡ ಕಾರ್ಮಿಕರ ವಿವಿಧ ಕಿಟ್‌ಗಳ ಹೆಸರಿನಲ್ಲಿ ಬಹುಕೋಟಿ ಹಗರಣವನ್ನು ನಡೆಸಿದ್ದರು ಕಾರ್ಮಿಕರು ಒಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದರಿಂದ ಬಿಜೆಪಿ ತೊಲಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ದೊರಕಿಸಿಕೊಟ್ಟಿದ್ದಾರೆ. ಅದೇ ರೀತಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಹ ಕೇಂದ್ರದಲ್ಲಿ ಬಿಜೆಪಿ ತೊಲಗಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹವಾಗಿದೆ. ಕಾನೂನು ಪ್ರಕಾರ ಆ ಹಣವನ್ನು ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದ ಕಾರ‌್ಯಕ್ರಮಗಳನ್ನು ಹೊರತುಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಬಳಸುವಂತಿಲ್ಲ. ಆದರೆ ಕಾರ್ಮಿಕ ಸಚಿವಾಲಯ ಬೇಕಾಬಿಟ್ಟಿ ಕಾರ್ಯಕ್ರಮಗಳನ್ನು ಮಾಡಿ ಹಣವನ್ನು ನೇರವಾಗಿ ಕಾರ್ಮಿಕರ ಖಾತೆಗೆ ಹೋಗದೇ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಅವರಿಗೆ ಬುದ್ದಿ ಕಲಿಸುವ ಸಂದರ್ಭ ಬಂದಿದೆ ಯೋಚನೆ ಮಾಡುವ ಶಕ್ತಿ ನಿಮಗೆ ಇದೆ ನುಡಿದಂತೆ ನಡೆಯುವ ಕಾಂಗ್ರೆಸ್ ಬೇಕೋ ಕಾರ್ಮಿಕರ ಹಣ ಊಟಿ ಮಾಡುವ ಪಕ್ಷ ಬೇಕೋ ನಿರ್ಧಾರ ಮಾಡಿ ಎಂದರು.
ಈ ಸಂದರ್ಭದಲ್ಲಿ ಇಂಟಕ್ ರಾಜ್ಯ ಕಾರ್ಯಾಧ್ಯಕ್ಷ ಶ್ಯಾಮಣ್ಣರೆಡ್ಡಿ ಮಾತನಾಡಿ, ಕಾರ್ಮಿಕರು ಇಲ್ಲದೇ ಹೋದರೆ ಯಾವುದೇ ಕೆಲಸಗಳು ನಡೆಯದ ಸಂದರ್ಭದಲ್ಲಿ ಬಿಜೆಪಿ ಸರಕಾರಗಳು ಬಡವರ ಕಾರ್ಮಿಕರ ಪರವಾಗಿ ನಿಲ್ಲದೇ ಬಂಡವಾಳಶಾಹಿಗಳ ಭೂಮಾಲೀಕರ ಪರವಾದ ನೀತಿಗಳನ್ನು ತಂದಿದ್ದಾರೆ. ಕಾರ್ಮಿಕರ ಹಕ್ಕುಗಳನ್ನು ನಾಶ ಮಾಡಲು ಹೊರಟಿದ್ದಾರೆ ಈ ಚುನಾವಣೆ ಕಾರ್ಮಿಕರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಚ್ಚತ್ತುಕೊಂಡು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು
ಈ ಸಂದರ್ಭದಲ್ಲಿ ಇಂಟಕ್ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ಪ್ರಸ್ತಾವಿಕವಾಗಿ ಮಾತನಾಡಿ, ದೇಶದ ಭವಿಷ್ಯವಾದ ಕಾರ್ಮಿಕರ ಹಣವನ್ನು ದುರ್ಬಳಕೆ ಮಾಡಿಕೊಂಡ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದೇ ಕಾರ್ಮಿಕರ ಗುರಿಯಾಗಬೇಕು ಹಿಂದೆ ರಾಜ್ಯದಲ್ಲಿ ಇದ್ದ ಬಿಜೆಪಿ ಸರಕಾರ ಮತ್ತು ಕೇಂದ್ರದಲ್ಲಿನ ಮೋದಿ ಸರ್ಕಾರವು ಕಟ್ಟಡ ಕಾರ್ಮಿಕ ಕಾಯ್ದೆಗಳನ್ನು ರದ್ದುಮಾಡಲು ಹೊರಟಿದೆ. ಇದರ ವಿರುದ್ಧ ಕಾರ್ಮಿಕರು ಎಚ್ಚೆತ್ತುಕೊಂಡಿದ್ದು, ಈ ಬಾರಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿ ಎಂದರು
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಲೇಬರ್ ಸೆಲ್ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಎಐಟಿಯುಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಸೆಂಟ್ಟ್ರಿಗ್ ಕಟ್ಟಡ ಕಾರ್ಮಿಕ ಸಂಘದ ನವೀನ್ ಬಾಲು, ನ್ಯೂ ಕೋಲಾರ ಕಟ್ಟಡ ಕಾರ್ಮಿಕರ ಸಂಘದ ಶಿವಕುಮಾರ್ ರೆಡ್ಡಿ, ಕಟ್ಟಡ ಕಾರ್ಮಿಕ ಸಂಘಟನೆಯ ಮುಖಂಡರಾದ ನಾಗರಾಜ್, ಚಲಪತಿ, ವೆಂಕಟೇಶ್, ಲಕ್ಷ್ಮೀಕಾಂತಮ್ಮ, ಶಿವಣ್ಣ, ಲಕ್ಷ್ಮಿದೇವಿ, ಗೀತಾ ಮುಂತಾದವರು ಇದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…