ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನ ಜನರಿಗೆ ತಲುಪಿಸುವ ಮತ್ತು ಪಕ್ಷದತ್ತ ಯುವಕರನ್ನ ಸೆಳೆಯುವ ಕೆಲಸ ಮಾಡಲಾಗುವುದು- ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ

ಇದೇ ಮೊದಲ ಬಾರಿಗೆ ಆನ್ನೈನ್ ಮೂಲಕ ನಡೆಸಲಾದ ಯುವ ಕಾಂಗ್ರೆಸ್ ಸಮಿತಿ ಚುನಾವಣಾ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ.

ಇದರಂತೆ ಯುವ ಕಾಂಗ್ರೆಸ್‌ ಸಮಿತಿ ರಾಜ್ಯಾಧ್ಯಕ್ಷರಾಗಿ ಎಚ್.ಎಸ್.ಮಂಜುನಾಥ್ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಟಿ.ವಿ.ಶರತ್ ಪಾಟೀಲ್‌, ಪ್ರಧಾನ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಎನ್, ದೊಡ್ಡಬಳ್ಳಾಪುರ ಗ್ರಾಮಾಂತರ ಅಧ್ಯಕ್ಷರಾಗಿ ರಾಕೇಶ್ ಗೌಡ ಮತ್ತು ತಾಲೂಕು ಉಪಾಧ್ಯಕ್ಷರಾಗಿ ಶ್ರವಣೂರು ರಾಜೇಶ್ ಎನ್, ಜಿಲ್ಲಾ ಉಪಾಧ್ಯಕ್ಷರಾಗಿ ಬೆಳ್ಳಿ ನಾಗೇಶ್.ಎಂ, ತಾಲೂಕು ಉಪಾಧ್ಯಕ್ಷ ಮುನಿರಾಜು, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಆರ್.ವಿ, ನಗರ ಉಪಾಧ್ಯಕ್ಷ ಹರ್ಷಿತ್ ಅವರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಿಗೆ ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯ, ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಹಾಗೂ ಕೆ.ಎಚ್ ಮುನಿಯಪ್ಪ, ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನ ಪ್ರಾಧಿಕಾರದ ಸದಸ್ಯ ಹಾಗೂ ವಕೀಲ ಆರ್.ವಿ.ಮಹೇಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ನ ಹಲವಾರು ನಾಯಕರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ.

ಅಭಿನಂದನೆ ಸ್ವೀಕರಿಸಿ‌ ಪಬ್ಲಿಕ್ ಮಿರ್ಚಿಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಟಿ.ವಿ.ಶರತ್ ಪಾಟೀಲ್‌ ಮಾತನಾಡಿ, ನೂತನ ಪದಾಧಿಕಾರಿಗಳು ನಮ್ಮ ಮೇಲೆ ಭರವಸೆ ಇಟ್ಟು ನಮಗೆ ಅಧಿಕ ಮತಗಳನ್ನು ನೀಡಿ ಪಕ್ಷದ ಕೆಲಸ ಮಾಡಲು ಬೆಂಬಲಿಸಿದ ಎಲ್ಲಾ ಯುವ ಕಾಂಗ್ರೆಸ್ ಸದಸ್ಯರಿಗೆ ಹಾಗೂ ಬೆಂಬಲಿಸಿದ ಮುಖಂಡರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ‌. ನಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ಬಳಸಿಕೊಂಡು ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಕಟ್ಟಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ತರುವಂತೆ ಮಾಡುವುದೇ ನಮ್ಮ ಉದ್ದೇಶ ಎಂದರು.

ನಂತರ ಪಬ್ಲಿಕ್ ಮಿರ್ಚಿಯೊಂದಿಗೆ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಆರ್.ವಿ ಮಾತನಾಡಿ, ಕಾಂಗ್ರೆಸ್ ಪಕ್ಷ ನನಗೆ ಒಂದು ಒಳ್ಳೆ ಅವಕಾಶ, ಜವಾಬ್ದಾರಿ ನೀಡಿದೆ‌. ಪಕ್ಷಕ್ಕೆ ನಿಷ್ಠನಾಗಿ, ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ಇನ್ನೂ ಗಟ್ಟಿಗೊಳಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದಲ್ಲಿನ ಯೋಜನೆಗಳನ್ನ ಜನರಿಗೆ ತಲುಪಿಸುವ ಮತ್ತು ಪಕ್ಷದತ್ತ ಯುವಕರನ್ನ ಸೆಳೆಯುವ ಕೆಲಸವನ್ನ ಮಾಡಲಾಗುವುದು, ಪಕ್ಷದಲ್ಲಿನ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಪಕ್ಷ ಬಲವರ್ಧನೆಗಾಗಿ ದುಡಿಯುವುದಾಗಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!