ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ಎರಡನೇ ಭಾಗದ ಫಸ್ಟ್ ಲುಕ್ ಹಾಗೂ ಟೀಸರ್ ಇಂದು ಚಿತ್ರತಂಡ ಬಿಡುಗಡೆ ಮಾಡಿದೆ.
ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಯೂಟೂಬ್ ನಲ್ಲಿ ಟೀಸರ್ ನ್ನು ಬಿಡುಗಡೆ ಮಾಡಿದೆ.
‘ದೈವಿಕ ಭೂಮಿ ಕಡೆಗೆ ಹೆಜ್ಜೆ’ ಎಂದು ಕಾಂತಾರ ಪ್ರೀಕ್ವೆಲ್ ಕುರಿತು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಬರೆದುಕೊಂಡಿದೆ.
ಟೀಸರ್ ಜೊತೆಗೆ ಚಿತ್ರದ ಫಸ್ಟ್ ಲುಕ್ ಸಹ ಇಂದೇ ಬಿಡುಗಡೆಯಾಗಿದ್ದು, ಫಸ್ಟ್ ಲುಕ್ ನಲ್ಲಿ ನಟ ರಿಷಬ್ ಶೆಟ್ಟಿ ವಿಭಿನ್ನವಾದ ರೌದ್ರಾವತಾರದಲ್ಲಿ ಕಾಣಿಸಿಕೊಂಡಿರುವುದು ಸಿನಿ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ.