Categories: ರಾಜ್ಯ

ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು- ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು- ಸಿಎಂ ಸಿದ್ದರಾಮಯ್ಯ

ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಶ ಏರ್ಪಿಡಿಸಿರುವ ಶ್ರೀ ಮಠದ ಗುರುಗಳಿಗೆ ಹೃದಯಪೂರ್ವಕವಾಗಿ ವಂದಿಸುತ್ತೇನೆ. ಇದು ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀ‌ ಕಾಗಿನೆಲೆ ಮಹಾಸಂಸ್ಥಾನ ಕನಕ‌ಗುರುಪೀಠದಲ್ಲಿ ಆಯೋಜಿಸಿದ್ದ 536ನೇ ಶ್ರೀ ಕನಕ ಜಯಂತ್ಯೋತ್ಸವ ಮತ್ತು ಭಾವೈಕ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಡ್ಯವನ್ನು ಸಾರಾಸಗಟಾಗಿ ತಿರಸ್ಕರಿಸಿದರು ಎಂದರು.

ನಾವ್ಯಾರೂ ಅರ್ಜಿ ಹಾಕೊಂಡು ಜಾತಿ-ಧರ್ಮ ಆರಿಸಿಕೊಂಡು ಹುಟ್ಟಿಲ್ಲ. ಮೊದಲು ಮನುಷ್ಯರು – ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು. ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಚಿಸಲೇ ಇಲ್ಲ. ಎಲ್ಲಾ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮಗಳ ಉದ್ದೇಶ ಆಗಿತ್ತು ಎಂದು ಹೇಳಿದ್ದಾರೆ.

ಧರ್ಮ ಇರುವುದು ನಮಗಾಗಿ. ನಾವು ಧರ್ಮಕ್ಕಾಗಿ ಅಲ್ಲ. ಅದಕ್ಕೇ ಕನಕದಾಸರು ಕುಲ ಕುಲವೆಂದು ಬಡಿದಾಡದಿರಿ ಎಂದು ಹೇಳಿದ್ದು. ಬಸವಣ್ಣನವರು, “ಇವ ನಮ್ಮವ ಇವ ನಮ್ಮವ” ಎಂದಿದ್ದು. ಕುವೆಂಪು ಅವರು, “ಹುಟ್ಟುವಾಗ ಎಲ್ಲರೂ ವಿಶ್ವ ಮಾನವರು” ಎಂದರು, ಅಂಬೇಡ್ಕರ್ ಅವರು ಸಮ ಸಮಾಜದ ಬಗ್ಗೆ ಹೇಳಿದರು. ಬಸವಾದಿ ಶರಣರು, ಕನಕದಾಸರು,  ಅಂಬೇಡ್ಕರ್, ಕುವೆಂಪು, ಸೂಫಿಗಳ  ಆಶಯಗಳೆಲ್ಲಾ ಒಂದೇ ಆಗಿತ್ತು. ಆದ್ದರಿಂದ ನಾವುಗಳು ಇವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

5 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

18 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

19 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

21 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

22 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

24 hours ago