ಕಾಡಾನೆ ತುಳಿತಕ್ಕೆ ಓರ್ವ ಬಲಿ: ವನ್ಯ ಪ್ರಾಣಿಗಳ ಉಪಟಳ: ಸಂಕಷ್ಟಕ್ಕೀಡಾದ ರೈತರು

ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಇಂದು ಬೆಳಿಗ್ಗೆ 6.45ರ ಸಮಯದಲ್ಲಿ ನಡೆದಿದೆ.

ಆನೆ ತುಳಿತಕ್ಕೆ ಸುಮಾರು 63 ವರ್ಷದ ಅಯ್ಯಮಾಡ ಮಾದಯ್ಯ( ಬೊಗ್ಗ) ಮೃತಪಟ್ಟಿದ್ದಾರೆ.

ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ರೈತರ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಇದುವರೆಗೆ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರು, ಕಾಫಿ, ಬೆಳೆಗಾರರು ಹಾಗೂ ಕಾರ್ಮಿಕರು ಇಲ್ಲಿ ಬದುಕುವುದೇ ಕಷ್ಟವಾಗಿದೆ ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ಕಾಡಾನೆ ತುಳಿತಕ್ಕೆ ಮೃತಪಟ್ಟ ಬೀರುಗ ಗ್ರಾಮದ ಅಯ್ಯಮಡ ಮಾದಯ್ಯ ಅವರ ಕುಟುಂಬಕ್ಕೆ ಡಿ. ಎಫ್.ಓ ಭಾಸ್ಕರ್ ರವರು 15ಲಕ್ಷ ರೂಪಾಯಿ ಚೆಕ್ಕನ್ನು ಹತ್ತಾಂತರಿಸಿದ್ದಾರೆ.

ಈ ಸಂದರ್ಭ ವಿಧಾನಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ,  ಎ.ಸಿ.ಎಫ್  ನೆಹರು, ರೈತ ಸಂಘದ ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *