ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ನಮ್ಮ ಸರ್ಕಾರ ಕೇವಲ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಮಾತ್ರ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.
ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರದೆ ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.
ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.
ಈ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಸೇರಿದಂತೆ ಇತರರು ಭಾಗಿಯಾಗಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…