ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ – ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ. ಹಣವಂತರು, ಬಲಾಢ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು. ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.
ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು. ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು. ಆಗ ಅಪರಾಧ ಕೃತ್ಯಗಳನ್ನು ನಡೆಯುವ ಮೊದಲು ತಡೆಯಲು ಸಾಧ್ಯ ಎಂದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…