Categories: ಮೈಸೂರು

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ- ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿರಬೇಕು- ಸಿಎಂ ಸಿದ್ದರಾಮಯ್ಯ

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ – ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ. ಹಣವಂತರು, ಬಲಾಢ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು‌.

ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು. ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.

ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು. ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು. ಆಗ ಅಪರಾಧ ಕೃತ್ಯಗಳನ್ನು ನಡೆಯುವ ಮೊದಲು ತಡೆಯಲು ಸಾಧ್ಯ ಎಂದರು.

Ramesh Babu

Journalist

Recent Posts

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

5 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

16 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

18 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

18 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

18 hours ago

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

20 hours ago