
ಕಾಫಿನಾಡಿನಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
29 ವರ್ಷದ ಮೀನಾಕ್ಷಿ, 75 ವರ್ಷದ ವೃದ್ಧ ಸುಮಿತ್ರೆಗೌಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ಮೀನಾಕ್ಷಿ (29), ತೀವ್ರ ಜ್ವರದಿಂದ ಬಳಲುತ್ತಿದ್ದರು. ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಕಾರಿನಲ್ಲೇ ಹೃದಯಾಘಾತದಿಂದ ಮಹಿಳೆ ಮೃತಪಟ್ಟಿದ್ದಾರೆ.

ಮೂಡಿಗೆರೆ ತಾಲೂಕಿನ ಬಿ.ಹೊಸಳ್ಳಿ ಗ್ರಾಮದ 75 ವರ್ಷದ ಸುಮಿತ್ರೆಗೌಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸುಮಿತ್ರೆಗೌಡ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.