ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನ ಮುಂದೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಲಿನನಾಯಕರಂಡನಹಳ್ಳಿ ಬಳಿ ಏಕಾಏಕಿ ನಾಯಿ ಬಂದಿದ್ದು, ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಈ ವೇಳೆ ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದರು. ಅಪಘಾತದಿಂದ ವಿದ್ಯುತ್ ಕಂಬಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆಯಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…