ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬಾಗಲೂರು ಕ್ರಾಸ್ ನಲ್ಲಿ ನಡೆದಿದೆ.
ಸುಮಾರು 50 ವರ್ಷದ ಕೃಷ್ಣ ಯಾದವ್ ಮೃತ ವ್ಯಕ್ತಿ. ಶವದ ಮೇಲೆ ಗಾಯದ ಗುರುತುಗಳು ಕಂಡುಬಂದಿರುವ ಕಾರಣ ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟಿರೋ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಿಯಲ್‌ಎಸ್ಟೇಟ್ ಉದ್ಯಮಿಯಾಗಿದ್ದ ಕೃಷ್ಣ ಯಾದವ್, ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು.
ಮನೆಯಿಂದ ಕೆಲಸಕ್ಕೆಂದು ಹೊರ ಹೊಗಿದ್ದ ವ್ಯಕ್ತಿ. ಇಂದು ಬೆಳಗ್ಗೆ ತನ್ನದೆ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸದ್ಯ ಪೊಲೀಸರಿಂದ ತನಿಖೆ ಮುಂದುವರಿದಿದೆ.