ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಜಿ.ಕೆ ಕುಂಟನಹಳ್ಳಿ ಬಯಲು ಪ್ರದೇಶದಲ್ಲಿ ನಡೆದಿತ್ತು…
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಕಿ ಕಾಣಿಸಿಕೊಂಡ ನಂತರ ಕಾರಿನಿಂದ ಹೊರ ಬಂದು ಜೀವ ರಕ್ಷಣೆ ಮಾಡಿಕೊಂಡಿದ್ದ ರಾಮಾಂಜಿನಪ್ಪ ಎಂಬ ವ್ಯಕ್ತಿ ಕೂಡ ಬಿಡದಿ ವ್ಯಾಪ್ತಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಒದಗಿಬಂದಿದೆ…
ಮೃತ ರಾಮಾಂಜಿನಪ್ಪ ಮಾರಸಂದ್ರ ಗ್ರಾಮದ ನಿವಾಸಿಯಾಗಿದ್ದು, ಮೇ.2ರಂದು ಮಾರಸಂದ್ರ ಸುರೇಶ್ ಎಂಬುವರ ಗ್ಲಾಂಜಾ ಕಾರನ್ನು ಪಡೆದು ಮಹಿಳೆಯೊಬ್ಬರನ್ನು ಕಾರಿನಲ್ಲಿ ಕರೆದುಕೊಂಡು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಜಿ.ಕೆ ಕುಂಟನಹಳ್ಳಿ ಬಯಲು ಪ್ರದೇಶಕ್ಕೆ ಬಂದಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಮಹಿಳೆ ಸುಟ್ಟುಕರಕಲಾಗಿದ್ದಳು. ಆದರೆ ರಾಮಾಂಜಿನಪ್ಪ ಪ್ರಾಣಾಪಾಯದಿಂದ ಪಾರಾಗಿದ್ದ. ಸ್ಥಳದಲ್ಲಿ ಮೊಬೈಲ್, ಶರ್ಟ್ ಎಸೆದು ಅಲ್ಲಿಂದ ಪರಾರಿಯಾಗಿದ್ದ. ಘಟನೆ ನಂತರ ತಲೆಮರೆಸಿಕೊಂಡಿದ್ದ, ಇದೀಗ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಸಂಶಯಕ್ಕೆ ಕಾರಣವಾಗಿದೆ.
ಗೌರಿಬಿದನೂರು ಮೂಲದ ಸುಜಾತಾ (35), ದೇವನಹಳ್ಳಿ ಮೂಲದ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಗೌರಿಬಿದನೂರಿನಿಂದ ಗಂಡನ ಮನೆ ಅಂದರೆ ದೇವನಹಳ್ಳಿಗೆ ಹೋಗುತ್ತೇನೆ ಎಂದು ಮನೆಯಿಂದ ಬಂದು ಬೀದಿ ಹೆಣವಾಗಿದ್ದಾಳೆ.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…