ಕಾರಿನ ಮುಂಭಾಗದ ಟಯರ್ ಸ್ಫೋಟಗೊಂಡು ಬೈಕ್, ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಷಾತ್ ಸಾರ್ವಜನಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ತಾಲೂಕಿನ ಪಾಲನಜೋಗಿಹಳ್ಳಿ ಬಳಿ ಹಾದುಹೋಗಿರುವ ಯಲಹಂಕ-ಹಿಂದೂಪುರ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಕಾರಿನಲ್ಲಿದ್ದವರು ನೇರಳೇಘಟ್ಟ ಮೂಲದವರು ಎನ್ನಲಾಗಿದೆ.
ಕಂಟನಕುಂಟೆ ಕಡೆಯಿಂದ ಬಂದ ಕ್ರೆಟಾ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮೊದಲು ಬೈಕ್ ಗೆ ಡಿಕ್ಕಿ ಹೊಡೆದು ನಂತರ ಟಾಟಾ ಏಸ್ ಗೂ ಕೂಡ ಡಿಕ್ಕಿ ಹೊಡೆದಿದೆ, ಇದಾದ ನಂತರ ಡಿವೈಡರ್ ಮೇಲೆ ನಿಂತಿದೆ.
ಇದರಿಂದ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ದೌಡಾಯಿಸಿ ಟ್ರಾಫಿಕ್ ಜಾಮ್ ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…
ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…
ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…