ಕಾರು ಅಪಘಾತದಲ್ಲಿ ಮೂವರು ಅಪ್ತ ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ನೈಸ್ ರಸ್ತೆಯ ಟೋಲ್ ಬಳಿ ನಡೆದಿದೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ವಿನೋದ್, ಇದೇ ಗ್ರಾಮದ ಕುಮಾರ್, ನಂಜೇಶ್ ಮೂರು ಜನ ಗೋವಾಗೆ ತೆರಳಬೇಕೆಂದು ಬೆಂಗಳೂರಿನತ್ತ ಬರುವ ವೇಳೆ ಈ ದುರ್ಗಟನೆ ನಡೆದಿದೆ.
ಆಕಸ್ಮಿಕವಾಗಿ ಕಾರಿನ ಕಂಟ್ರೋಲ್ ಮಿಸ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಕಾರು ಜಂಪ್ ಆಗಿದೆ.. ಹೀಗೆ ಮಿಸ್ ಆದ ಕಂಟ್ರೋಲ್ನಿಂದ ಆಗಬಾರದ ದುರಂತ ಸಂಭವಿಸಿ ಬಿಟ್ಟಿದೆ. ಒಂದು ಕಡೆ ಎಕ್ಸ್ ಯು ವಿ 700 ಕಾರು ಕಂಪ್ಲೀಟ್ ಡ್ಯಾಮೇಜ್ ಆಗಿದ್ದರೆ, ಮತ್ತೊಂದು ಕಡೆ ಸ್ಕಾರ್ಪಿಯೋ ಪೀಸ್ ಪೀಸ್ ಆಗಿದೆ.
ಮಳೆಯಿಂದಾಗಿ ಕಾರಿನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿರೋ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲೇ ಇದ್ದ ವಾಹನ ಸವಾರರು ವಾಹನದಲ್ಲಿ ಸಿಲುಕಿದ್ದವರನ್ನ ರಕ್ಷಿಸಿದ್ದಾರೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…