ಭಾರತ ತಂಡದ ಭರವಸೆಯ ಯುವ ಆಟಗಾರ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಪ್ರಯಾಣಿಸುತ್ತಿದ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕ್ರಿಕೆಟಿಗ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರಾಖಂಡದಿಂದ ದೆಹಲಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹರಿದ್ವಾರದ ಬಳಿ ಕಾರು ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿದ್ದು ಕ್ರಿಕೆಟಿಗ ರಿಷಭ್ ಪಂತ್ ಅವರ ತಲೆ, ಬೆನ್ನು ಹಾಗೂ ಕಾಲುಗಳಿಗೆ ಗಾಯಗಳಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ದೆಹಲಿಯಲ್ಲಿ ವೈದ್ಯರು ತಿಳಿಸಿದ್ದಾರೆ.
ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗದ ಕಾರಣದಿಂದಾಗಿ ಕಾರು ಸಂಪೂರ್ಣವಾಗಿ ಭಸ್ಮವಾಗಿದೆ.
ಗಾಯಗೊಂಡಿರುವ ಯುವ ಆಟಗಾರ ರಿಷಭ್ ಪಂತ್ ಆದಷ್ಟು ಶೀಘ್ರ ಗುಣಮುಖರಾಗುವಂತೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಹಿರಿಯ ಆಟಗಾರರು ಹಾಗೂ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…