ಚಿಕ್ಕಬಳ್ಳಾಪುರ: ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿಗೆ ಬಸ್ ಡಿಕ್ಕಿ ಹೊಡೆದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗ ಹೊತ್ತಿ ಉರಿದಿದೆ. ಕಾರಿನಲ್ಲೇ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಗೋಪಲ್ಲಿ ಗೇಟ್ ಬಳಿ ದುರ್ಘಟನೆ ನಡೆದಿದೆ.
ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಸದ್ಯ ಬಚಾವ್ ಆಗಿದ್ದಾರೆ. ಕಾರಿನಲ್ಲಿದ್ದ ಇನ್ನು ಮೂರು ಜನ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನಿಂದ ತಿರುಪತಿಗೆ ಹೋಗುತಿದ್ದ ಭಾರತಿ ಬಸ್ ಬಸ್, ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸ್ಳಳಕ್ಕೆ ಅಗ್ನಿಶಾಮಕ ದಳ ಆಂಬ್ಯುಲೆನ್ಸ್ ಹಾಗು ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವಷ್ಟರಲ್ಲೊಲಿ ಇಬ್ಬರು ಸಜೀವ ದಹನವಾಗಿದ್ದಾರೆ.
ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.