ಕಾರು–ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ಮೃತರನ್ನು ಪ್ರಕಾಶ್ ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಮೂಗೇನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ರಸ್ತೆ ಕ್ರಾಸ್ ಮಾಡುವ ವೇಳೆ ಅತಿವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರಕಾಶ್ ಮೃತಪಟ್ಟಿದ್ದಾರೆ.

ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!